Ruth 3:14 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ರೂತಳು ಬೆಳಗಿನ ಜಾವದವರೆಗೂ ಬೋವಜನ ಪಾದಗಳ ಬಳಿಯಲ್ಲಿಯೇ ಮಲಗಿದ್ದು ಇನ್ನೂ ಕತ್ತಲಿರುವಾಗಲೇ ಎದ್ದಳು. ಬೋವಜನು ಅವಳಿಗೆ, “ನೀನು ನಿನ್ನೆ ರಾತ್ರಿ ನನ್ನಲ್ಲಿಗೆ ಬಂದಿದ್ದೆ ಎಂಬ ಸಂಗತಿಯು ರಹಸ್ಯವಾಗಿರಲಿ” ಎಂದು ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಕೆಯು ಆ ವರೆಗೂ ಅವನ ಕಾಲುಗಳ ಬಳಿಯಲ್ಲೇ ಮಲಗಿಕೊಂಡಿದ್ದಳು. ಒಬ್ಬ ಹೆಂಗಸು ಕಣಕ್ಕೆ ಬಂದಿದ್ದಳೆಂಬುವುದು ಯಾರಿಗೂ ಗೊತ್ತಾಗಬಾರದೆಂದು ಅವನು ಹೇಳಿದ್ದರಿಂದ ಗುರುತು ಹಿಡಿಯಲಾರದಷ್ಟು ಕತ್ತಲಿರುವಾಗಲೇ ಆಕೆಯು ಎದ್ದಳು.
Kannada BSI Bible 2016
ಅವಳು ಹಾಗೆಯೇ ಉದಯ ಕಾಲದ ವರೆಗೂ ಅವನ ಪಾದ ಗಳ ಬಳಿಯಲ್ಲಿ ಮಲಗಿದ್ದು ಒಬ್ಬನಿಗೂ ಗೊತ್ತಾಗ ಬಾರದೆಂದು ಇನ್ನೂ ಕತ್ತಲಿರುವಾಗಲೇ ಎದ್ದಳು. ಅವನು ಒಬ್ಬ ಹೆಂಗಸು ಕಣದಲ್ಲಿ ಬಂದಳೆಂದು ಯಾರಿಗೂ ತಿಳಿಯಲ್ಪಡದಿರಲಿ ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಕೆಯು ಆ ವರೆಗೂ ಅವನ ಕಾಲುಗಳ ಬಳಿಯಲ್ಲೇ ಮಲಗಿಕೊಂಡಿದ್ದಳು. ಒಬ್ಬ ಹೆಂಗಸು ಕಣಕ್ಕೆ ಬಂದಿದ್ದಳೆಂಬದು ಯಾರಿಗೂ ಗೊತ್ತಾಗಬಾರದೆಂದು ಅವನು ಹೇಳಿದ್ದರಿಂದ ಗುರುತುಹಿಡಿಯಲಾರದಷ್ಟು ಕತ್ತಲಿರುವಾಗಲೇ ಆಕೆಯು ಎದ್ದಳು.
Kannada Bible (KNCL) BSI 2016
ಅದರಂತೆ ಅವಳು ಅವನ ಪಾದಗಳ ಬಳಿಯಲ್ಲೇ ಮಲಗಿದಳು. ಅವಳು ಅಲ್ಲಿಗೆ ಬಂದದ್ದು ಯಾರಿಗೂ ತಿಳಿಯಬಾರದೆಂದು ಬೋವಜನು ಹೇಳಿದ್ದನು; ಎಂತಲೇ ನಸುಕಿನಲ್ಲೇ ಎದ್ದಳು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವಳು ಹಾಗೆಯೇ ಉದಯಕಾಲದವರೆಗೂ ಅವನ ಪಾದಗಳ ಬಳಿಯಲ್ಲಿ ಮಲಗಿದ್ದು ಯಾರಿಗೂ ಗೊತ್ತಾಗಬಾರದೆಂದು ಹೊತ್ತಿಗೆ ಮುಂಚೆ ಎದ್ದಳು. ಅವನು, “ಒಬ್ಬ ಸ್ತ್ರೀ ಕಣದಲ್ಲಿ ಬಂದಳೆಂದು ಯಾರಿಗೂ ತಿಳಿಯದಿರಲಿ,” ಎಂದನು.