Ruth 3:15 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಬೋವಜನು, “ನಿನ್ನ ಹೊದಿಕೆಯನ್ನು ಇಲ್ಲಿ ತೆಗೆದುಕೊಂಡು ಬಾ. ಅದನ್ನು ಸ್ವಲ್ಪ ಅಗಲಮಾಡಿ ಹಿಡಿದುಕೋ” ಎಂದನು. ರೂತಳು ತನ್ನ ಹೊದಿಕೆಯನ್ನು ಅಗಲಮಾಡಿ ಹಿಡಿದಳು. ಬೋವಜನು ಆರು ಸೇರಿನಷ್ಟು ಜವೆಗೋಧಿಯನ್ನು ಅದರಲ್ಲಿ ಸುರಿದು ಚೆನ್ನಾಗಿ ಕಟ್ಟಿ ಅವಳ ಮೇಲೆ ಹೊರಿಸಿದನು. ಬಳಿಕ ಆಕೆ ಊರೊಳಗೆ ಹೋದಳು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗ ಅವನು ಆಕೆಗೆ “ನಿನ್ನ ಮೇಲ್ಹೊದಿಕೆಯನ್ನು ಹಾಸು” ಎಂದು ಹೇಳಿದನು, ಆಕೆ ಹಾಸಲು ಅದರಲ್ಲಿ ಆರು ಪಡಿ ಜವೆಗೋದಿಯನ್ನು ಹಾಕಿ ಹೊರಿಸಿ ಕಳುಹಿಸಿದನು. ಆಕೆಯು ಊರೊಳಕ್ಕೆ ಹೋದಳು.
Kannada BSI Bible 2016
ಇದಲ್ಲದೆ ಅವನು ನೀನು ಹೊದ್ದುಕೊಂಡಿರುವ ವಸ್ತ್ರವನ್ನು ತಂದು ಹಿಡಿ ಅಂದನು. ಅವಳು ಅದನ್ನು ಹಿಡಿದಾಗ ಅವನು ಅದ ರಲ್ಲಿ ಆರು ಸೊಲಿಗೆ ಜವೆಗೋಧಿಯನ್ನು ಅಳೆದು ಹಾಕಿ ಆಕೆಯ ಮೇಲೆ ಹೊರಿಸಿದನು. ಆಗ ಅವಳು ಪಟ್ಟಣಕ್ಕೆ ಬಂದಳು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಗ ಅವನು ಆಕೆಗೆ - ನಿನ್ನ ಕಂಬಳಿಯನ್ನು ಹಾಸು ಎಂದು ಹೇಳಿ ಆಕೆ ಹಾಸಲು ಅದರಲ್ಲಿ ಆರು ಪಡಿ ಜವೆಗೋದಿಯನ್ನು ಹಾಕಿ ಹೊರಿಸಿದನು. ಆಕೆಯು ಊರೊಳಕ್ಕೆ ಹೋಗಿ ಅತ್ತೆಯ ಬಳಿಗೆ ಬಂದಾಗ
Kannada Bible (KNCL) BSI 2016
ಬೋವಜನು ಆಕೆಗೆ, “ನಿನ್ನ ಮೇಲ್ಹೊದಿಕೆಯನ್ನು ಹಾಸು,” ಎಂದು ಹೇಳಿ ಅದರಲ್ಲಿ ಸುಮಾರು ಇಪ್ಪತ್ತೈದು ಕಿಲೋಗ್ರಾಂನಷ್ಟು ಜವೆಗೋದಿಯನ್ನು ಸುರಿದು, ಅದನ್ನೆತ್ತಿ ಹೊರಿಸಿದನು. ಆಕೆ ಅದನ್ನು ಹೊತ್ತುಕೊಂಡು ಊರೊಳಗೆ ಹೋದಳು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವನು, “ನಿನ್ನ ಮೇಲ್ಹೊದಿಕೆಯನ್ನು ಹಿಡಿ,” ಎಂದನು. ಅವಳು ಅದನ್ನು ಹಿಡಿದಾಗ ಅವನು ಅದರಲ್ಲಿ ಸುಮಾರು ಇಪ್ಪತ್ತೈದು ಕಿಲೋಗ್ರಾಂ ಜವೆಗೋಧಿಯನ್ನು ಅಳೆದು ಹಾಕಿ ಆಕೆಯ ಮೇಲೆ ಹೊರಿಸಿದನು. ಅವಳು ಅದನ್ನು ಹೊತ್ತುಕೊಂಡು ಪಟ್ಟಣಕ್ಕೆ ಬಂದಳು.