Ruth 3:18 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನೊವೊಮಿಯು, “ನನ್ನ ಮಗಳೇ, ಈ ಕಾರ್ಯದ ಫಲಿತಾಂಶ ಗೊತ್ತಾಗುವವರೆಗೆ ತಾಳ್ಮೆಯಿಂದಿರು. ಈ ಹೊತ್ತು ಅದನ್ನು ಇತ್ಯರ್ಥಪಡಿಸುವವರೆಗೆ ಅವನಿಗೆ ಸಮಾಧಾನವಿರಲಾರದು” ಎಂದು ಹೇಳಿದಳು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅತ್ತೆಯು “ನನ್ನ ಮಗಳೇ, ಈ ಕಾರ್ಯವು ಏನಾಗುವುದೆಂದು ಗೊತ್ತಾಗುವವರೆಗೂ ಸುಮ್ಮನಿರು; ಈ ವಿಷಯವನ್ನು ಇತ್ಯರ್ಥ ಮಾಡುವವರೆಗೂ ಅವನಿಗೆ ಸಮಾಧಾನವಿರಲಾರದು” ಎಂದು ಹೇಳಿದಳು.
Kannada BSI Bible 2016
ಅದಕ್ಕೆ ಅವಳು ನನ್ನ ಮಗಳೇ, ಈ ಕಾರ್ಯ ಏನಾಗುವದೋ ಎಂದು ನೀನು ತಿಳಿಯುವ ವರೆಗೂ ಸುಮ್ಮನೆ ಇರು; ಯಾಕಂದರೆ ಆ ಮನುಷ್ಯನು ಈ ಹೊತ್ತು ಈ ಕಾರ್ಯವನ್ನು ತೀರಿಸುವ ವರೆಗೂ ವಿಶ್ರಾಂತಿಯಲ್ಲಿ ಇರನು ಅಂದಳು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅತ್ತೆಯು - ನನ್ನ ಮಗಳೇ, ಈ ಕಾರ್ಯವು ಹೇಗಾಗುವದೆಂದು ಗೊತ್ತಾಗುವವರೆಗೂ ಸುಮ್ಮನಿರು; ಈ ಹೊತ್ತು ಅದನ್ನು ಇತ್ಯರ್ಥ ಪಡಿಸುವವರೆಗೆ ಅವನಿಗೆ ಸಮಾಧಾನವಿರಲಾರದು ಎಂದು ಹೇಳಿದಳು.
Kannada Bible (KNCL) BSI 2016
ಆಗ ನವೊಮಿ, “ಮಗಳೇ, ಇದರ ಫಲಿತಾಂಶ ಏನಾಗುವುದೆಂದು ಗೊತ್ತಾಗುವವರೆಗೂ ತಾಳ್ಮೆಯಿಂದಿರು. ಬೋವಜನು ಈ ವಿಷಯವನ್ನು ಇತ್ಯರ್ಥ ಮಾಡುವವರೆಗೆ ಸುಮ್ಮನಿರಲಾರನು,” ಎಂದು ಹೇಳಿದಳು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅದಕ್ಕೆ ನೊವೊಮಿ, “ನನ್ನ ಮಗಳೇ, ಈ ಕಾರ್ಯ ಏನಾಗುವುದೋ, ಎಂದು ನೀನು ತಿಳಿಯುವವರೆಗೂ ಸುಮ್ಮನೆ ಇರು. ಆ ಮನುಷ್ಯನು ಈ ಹೊತ್ತು ಈ ಕಾರ್ಯವನ್ನು ತೀರಿಸುವವರೆಗೂ ವಿಶ್ರಾಂತಿಯಲ್ಲಿ ಇರಲಾರನು,” ಎಂದಳು.