Ruth 3:4 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಊಟವಾದ ಮೇಲೆ ವಿಶ್ರಾಂತಿ ತೆಗೆದುಕೊಳ್ಳುವುದಕ್ಕಾಗಿ ಅವನು ಮಲಗುತ್ತಾನೆ. ಅವನು ಎಲ್ಲಿ ಮಲಗುತ್ತಾನೆಂಬುದನ್ನು ನೋಡಿಕೊಂಡಿದ್ದು ಅಲ್ಲಿಗೆ ಹೋಗಿ ಅವನ ಪಾದಗಳ ಮೇಲಿನ ಹೊದಿಕೆಯನ್ನು ತೆಗೆದು ಅಲ್ಲಿಯೇ ಮಲಗಿಕೋ. ನೀನು ಮಾಡತಕ್ಕದ್ದನ್ನು ಅವನು ನಿನಗೆ ತಿಳಿಸುತ್ತಾನೆ” ಎಂದಳು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವನು ಮಲಗಿದ ಸ್ಥಳವನ್ನು ತಿಳಿದುಕೊಂಡು ಹೋಗಿ ಅವನ ಕಾಲುಗಳ ಮೇಲಣ ಹೊದಿಕೆಯನ್ನು ತೆಗೆದು ಬಿಟ್ಟು ಅಲ್ಲೇ ಮಲಗಿಕೋ; ಆ ಮೇಲೆ ಮಾಡತಕ್ಕದ್ದನ್ನು ಅವನು ನಿನಗೆ ತಿಳಿಸುವನು” ಅಂದಳು.
Kannada BSI Bible 2016
ಅವನು ಮಲಗಿಕೊಂಡಾಗ ಅವನು ಮಲಗಿರುವ ಸ್ಥಳವನ್ನು ನೀನು ತಿಳುಕೊಂಡಿದ್ದು ಹೋಗಿ ಅವನ ಕಾಲುಗಳ ಮೇಲೆ ಹೊದ್ದಿದ್ದನ್ನು ತೆಗೆದು ಮಲಗಿಕೋ. ಆಗ ನೀನು ಮಾಡಬೇಕಾದದ್ದೇನೆಂದು ಅವನು ನಿನಗೆ ತಿಳಿಸುವನು ಅಂದಳು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವನು ಮಲಗಿದ ಸ್ಥಳವನ್ನು ಗೊತ್ತುಮಾಡಿಕೊಂಡು ಹೋಗಿ ಅವನ ಕಾಲುಗಳ ಮೇಲಣ ಹೊದಿಕೆಯನ್ನು ತೆಗೆದುಬಿಟ್ಟು ಅಲ್ಲೇ ಮಲಗಿಕೋ; ಆಮೇಲೆ ಮಾಡತಕ್ಕದ್ದನ್ನು ನಿನಗೆ ತಿಳಿಸುವನು ಅಂದಳು.
Kannada Bible (KNCL) BSI 2016
ಅವನು ಎಲ್ಲಿ ಮಲಗುತ್ತಾನೆ ಎಂಬುದನ್ನು ಗೊತ್ತುಮಾಡಿಕೊ. ಅವನು ಮಲಗಿದ ಮೇಲೆ ಅಲ್ಲಿಗೆ ಹೋಗು. ಅವನ ಪಾದಗಳ ಮೇಲಿನ ಹೊದಿಕೆಯನ್ನು ಮೆತ್ತಗೆ ಸರಿಸಿಬಿಟ್ಟು ಪಕ್ಕದಲ್ಲೇ ಮಲಗು. ಆಮೇಲೆ ನೀನು ಮಾಡಬೇಕಾದುದೇನೆಂಬುದನ್ನು ಅವನೇ ತಿಳಿಸುವನು,” ಎಂದು ಹೇಳಿದಳು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವನು ಮಲಗಿಕೊಂಡಾಗ ಅವನು ಮಲಗಿರುವ ಸ್ಥಳವನ್ನು ನೀನು ತಿಳಿದುಕೊಂಡು ಹೋಗಿ ಅವನ ಪಾದಗಳ ಮೇಲಿನ ಹೊದಿಕೆಯನ್ನು ತೆಗೆದು ಮಲಗಿಕೋ. ಆಗ ನೀನು ಮಾಡಬೇಕಾದದ್ದೇನೆಂದು ಅವನು ನಿನಗೆ ತಿಳಿಸುವನು,” ಎಂದಳು.