Ruth 4:1 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಬೋವಜನು ನಗರದ್ವಾರದ ಬಳಿಯಲ್ಲಿ ಕುಳಿತುಕೊಂಡನು. ತಾನು ಹೇಳಿದ್ದ ಸಮೀಪಬಂಧುವು ಅಲ್ಲಿಂದ ಹಾದು ಹೋಗುವವರೆಗೆ ಅವನು ಅಲ್ಲಿಯೇ ಕುಳಿತಿದ್ದನು. ಅವನನ್ನು ಕಂಡ ಬೋವಜನು, “ಸ್ನೇಹಿತನೇ ಇಲ್ಲಿ ಬಾ, ಇಲ್ಲಿ ಕುಳಿತುಕೋ” ಎಂದು ಕರೆದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಬೋವಜನು ಊರಬಾಗಿಲಿನ ಬಳಿಗೆ ಹೋಗಿ ಅಲ್ಲಿ ಕುಳಿತುಕೊಂಡನು. ತಾನು ಹೇಳಿದ್ದ ಸಮೀಪಬಂಧುವು ಆ ಮಾರ್ಗವಾಗಿ ಹೋಗುತ್ತಿದ್ದುದನ್ನು ಕಂಡು, ಬೋವಜನು ಅವನಿಗೆ “ಬಾರಪ್ಪಾ, ಇಲ್ಲಿ ಬಂದು ಕುಳಿತುಕೋ” ಎಂದು ಕರೆಯಲು ಅವನು ಬಂದು ಕುಳಿತುಕೊಂಡನು.
Kannada BSI Bible 2016
ಬೋವಜನು ಪಟ್ಟಣದ ಬಾಗಲಲ್ಲಿ ಹೋಗಿ ಕುಳಿತಿರುವಾಗ ಇಗೋ, ಬೋವಜನು ಹೇಳಿದ್ದ ಆ ಸಂಬಂಧಿಕನು ಹಾದು ಹೋಗುತ್ತಿದ್ದನು. ಆಗ ಅವನು ಓ ಮನುಷ್ಯನೇ, ಈ ಕಡೆಗೆ ಬಂದು ಇಲ್ಲಿ ಕೂತುಕೋ ಅಂದನು. ಅವನು ಬಂದು ಕೂತುಕೊಂಡನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಬೋವಜನು ಹೋಗಿ ಊರುಬಾಗಲಲ್ಲಿ ಕೂತನು. ತಾನು ಹೇಳಿದ್ದ ಸಮೀಪಬಂಧುವು ಆ ಮಾರ್ಗವಾಗಿ ಹೋಗುತ್ತಿರುವದನ್ನು ಕಂಡು ಅವನನ್ನು - ಎಲಾ, ಅಪ್ಪಾ, ಇತ್ತ ಬಂದು ಕೂತುಕೋ ಎಂದು ಕರೆಯಲು ಅವನು ಬಂದು ಕೂತುಕೊಂಡನು.
Kannada Bible (KNCL) BSI 2016
ಇತ್ತ ಬೋವಜನು ಊರಿನ ಸಭಾಮಂಟಪದ ಬಳಿ ಹೋಗಿ ಅಲ್ಲಿ ಕುಳಿತುಕೊಂಡನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಬೋವಜನು ಪಟ್ಟಣದ ಬಾಗಿಲ ಬಳಿ ಹೋಗಿ ಕುಳಿತುಕೊಂಡನು. ಆಗ ಬೋವಜನು ಹೇಳಿದ್ದ ಆ ವಿಮೋಚಕ ಬಂಧುವು ಹಾದುಹೋಗುತ್ತಿದ್ದನು. ಬೋವಜನು ಅವನಿಗೆ, “ನನ್ನ ಸ್ನೇಹಿತನೇ, ಈ ಕಡೆಗೆ ಬಂದು ಇಲ್ಲಿ ಕುಳಿತುಕೋ,” ಎಂದನು. ಅವನು ಬಂದು ಕುಳಿತುಕೊಂಡನು.