Ruth 4:10 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
0ಮೋವಾಬ್ಯಳೂ ಮಹ್ಲೋನನ ಹೆಂಡತಿಯೂ ಆಗಿದ್ದ ರೂತಳನ್ನು ನನ್ನ ಹೆಂಡತಿಯನ್ನಾಗಿ ತೆಗೆದುಕೊಳ್ಳುತ್ತೇನೆ. ಸತ್ತುಹೋದ ಮನುಷ್ಯನ ಆಸ್ತಿಯು ಅವನ ಹೆಸರಿನಲ್ಲಿ ಉಳಿಯಲೆಂದು ನಾನು ಹೀಗೆ ಮಾಡುತ್ತಿದ್ದೇನೆ. ಹೀಗೆ ಮಾಡುವುದರಿಂದ ಸತ್ತವನ ಹೆಸರು ಅವನ ಕುಟುಂಬದಲ್ಲಿಯೂ ಅವನ ಆಸ್ತಿಯಲ್ಲಿಯೂ ಉಳಿಯುವುದು. ಇದಕ್ಕೆ ನೀವೇ ಸಾಕ್ಷಿಯಾಗಿದ್ದೀರಿ” ಎಂದು ನುಡಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇದಲ್ಲದೆ ಹೊಲದ ಖಾತೆಯು ಸತ್ತುಹೋದ ಮಹ್ಲೋನನ ಹೆಸರಿನಲ್ಲೇ ಉಳಿದು, ಅವನ ಬಂಧುಗಳಲ್ಲಿಯೂ ಊರಲ್ಲಿಯೂ ಅವನ ಸಂತಾನವು ಉಳಿಯುವಂತೆ ಅವನ ಹೆಂಡತಿಯಾಗಿದ್ದ ಮೋವಾಬ್ಯಳಾದ ರೂತಳನ್ನು ನನ್ನ ಹೆಂಡತಿಯನ್ನಾಗಿ ತೆಗೆದುಕೊಂಡಿದ್ದೇನೆ ಇದಕ್ಕೆ ನೀವೇ ಸಾಕ್ಷಿಗಳು” ಎಂದು ಹೇಳಿದನು.
Kannada BSI Bible 2016
ಇದಲ್ಲದೆ ಸತ್ತವನ ಸಹೋದರರಿಂದಲೂ ಅವನ ಸ್ಥಳದ ಬಾಗಲದಿಂದಲೂ ಅವನ ಹೆಸರು ಕಡಿದು ಹಾಕಲ್ಪಡದ ಹಾಗೆ ಸತ್ತವನ ಬಾಧ್ಯತೆಯಲ್ಲಿ ಅವನ ಹೆಸರನ್ನು ಸ್ಥಿರಮಾಡಲು ನಾನು ಮಹ್ಲೋನನ ಹೆಂಡತಿಯಾಗಿದ್ದ ಮೋವಾಬ್ಯಳಾದ ರೂತಳನ್ನು ನನಗೆ ಹೆಂಡತಿಯಾಗಿ ಕೊಂಡುಕೊಂಡೆನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಹೊಲದ ಖಾತೆಯು ಸತ್ತುಹೋದ ಮಹ್ಲೋನನ ಹೆಸರಿನಲ್ಲೇ ನಿಂತು ಅವನ ಬಂಧುಗಳಲ್ಲಿಯೂ ಊರಲ್ಲಿಯೂ ಅವನ ಸಂತಾನವು ಉಳಿಯುವಂತೆ ಮೋವಾಬ್ಯಳೂ ಅವನ ಹೆಂಡತಿಯೂ ಆದ ರೂತಳನ್ನು ಹೆಂಡತಿಯನ್ನಾಗಿ ತೆಗೆದುಕೊಂಡಿದ್ದೇನೆ;
Kannada Bible (KNCL) BSI 2016
ಇದಲ್ಲದೆ, ಮಹ್ಲೋನನ ಪತ್ನಿಯಾದ ಮೋವಾಬ್ಯದ ರೂತಳನ್ನು ನನ್ನ ಹೆಂಡತಿಯನ್ನಾಗಿ ಸ್ವೀಕರಿಸಿದ್ದೇನೆ. ಇದರಿಂದ ಹೊಲದ ಖಾತೆ ಗತಿಸಿದ ಮಹ್ಲೋನನ ಹೆಸರಿನಲ್ಲೇ ಉಳಿಯುವುದು. ಮಾತ್ರವಲ್ಲ, ಅವನ ವಂಶವೃಕ್ಷವು ಅವನ ಬಂಧುಬಳಗದವರಲ್ಲೂ ಊರಿನಲ್ಲೂ ನೆಲೆಯಾಗಿರುವುದು. ಇದಕ್ಕೆ ನೀವೆಲ್ಲರೂ ಸಾಕ್ಷಿಗಳು,” ಎಂದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇದಲ್ಲದೆ ಸತ್ತವನ ಹೆಸರನ್ನು ಸ್ಥಿರಮಾಡಲು ನಾನು ಮಹ್ಲೋನನ ಹೆಂಡತಿಯಾಗಿದ್ದ ಮೋವಾಬ್ಯಳಾದ ರೂತಳನ್ನು ನನಗೆ ಹೆಂಡತಿಯಾಗಿ ಸ್ವೀಕರಿಸಿದ್ದೇನೆ. ಇದರಿಂದ ಹೊಲದ ಖಾತೆಯು ಗತಿಸಿದ ಮಹ್ಲೋನನ ಹೆಸರಿನಲ್ಲಿಯೇ ಉಳಿಯುವುದು. ಅವನ ಹೆಸರೂ ಅವನ ವಂಶವೂ ಊರಲ್ಲಿಯೇ ನೆಲೆಯಾಗಿರುವುದು. ಇದಕ್ಕೆ ಈ ದಿನ ನೀವು ಸಾಕ್ಷಿಗಳಾಗಿದ್ದೀರಿ,” ಎಂದನು.