Ruth 4:13 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಬೋವಜನು ರೂತಳನ್ನು ಮದುವೆಯಾದನು. ಯೆಹೋವನ ಕೃಪೆಯಿಂದ ರೂತಳು ಗರ್ಭವತಿಯಾಗಿ ಗಂಡುಮಗನಿಗೆ ಜನ್ಮಕೊಟ್ಟಳು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಬೋವಜನು ರೂತಳನ್ನು ಹೆಂಡತಿಯನ್ನಾಗಿ ಪರಿಗ್ರಹಿಸಿದ್ದರಿಂದ ಆಕೆಯು ಯೆಹೋವನ ಅನುಗ್ರಹದಿಂದ ಗರ್ಭಿಣಿಯಾಗಿ ಮಗನನ್ನು ಹೆತ್ತಳು.
Kannada BSI Bible 2016
ಬೋವಜನು ರೂತಳನ್ನು ತೆಗೆದುಕೊಂಡನು; ಅವಳು ಅವನಿಗೆ ಹೆಂಡತಿಯಾದಳು. ಅವನು ಅವಳನ್ನು ಕೂಡಿದಾಗ ಕರ್ತನು ಅವಳಿಗೆ ಗರ್ಭ ತೆರೆದದ್ದರಿಂದ ಅವಳು ಮಗನನ್ನು ಹೆತ್ತಳು.
Kannada BSI JV (ಕನ್ನಡ ಸತ್ಯವೇದವು J.V. (BSI))
ಬೋವಜನು ರೂತಳನ್ನು ಹೆಂಡತಿಯನ್ನಾಗಿ ಪರಿಗ್ರಹಿಸಿ ಕೂಡಲು ಆಕೆಯು ಯೆಹೋವನ ಅನುಗ್ರಹದಿಂದ ಗರ್ಭಿಣಿಯಾಗಿ ಮಗನನ್ನು ಹೆತ್ತಳು.
Kannada Bible (KNCL) BSI 2016
ಬೋವಜನು ರೂತಳನ್ನು ಮದುವೆಯಾಗಿ ಮನೆಗೆ ಕರೆದುಕೊಂಡು ಹೋದನು. ಸರ್ವೇಶ್ವರಸ್ವಾಮಿಯ ಅನುಗ್ರಹದಿಂದ ಆಕೆ ಗರ್ಭಿಣಿಯಾಗಿ ಒಬ್ಬ ಮಗನನ್ನು ಹೆತ್ತಳು. ಊರಿನ ಮಹಿಳೆಯರು ನವೊಮಿಗೆ:
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಬೋವಜನು ರೂತಳನ್ನು ಮದುವೆಯಾದನು. ಅವಳು ಅವನಿಗೆ ಹೆಂಡತಿಯಾದಳು. ಅವನು ಅವಳೊಂದಿಗೆ ಬಾಳಿದಾಗ, ರೂತಳು ಯೆಹೋವ ದೇವರ ಅನುಗ್ರಹದಿಂದ ಗರ್ಭಿಣಿಯಾಗಿ ಒಬ್ಬ ಮಗನನ್ನು ಹೆತ್ತಳು.