Ruth 4:17 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನೆರೆಹೊರೆಯವರು ಮಗುವಿಗೆ ಹೆಸರಿಟ್ಟರು. ಆ ಸ್ತ್ರೀಯರು, “ನೊವೊಮಿಗೆ ಗಂಡುಮಗು ಹುಟ್ಟಿದೆ” ಎಂದರು. ನೆರೆಯವರು ಓಬೇದನೆಂದು ಹೆಸರಿಟ್ಟರು. ಓಬೇದನು ಇಷಯನ ತಂದೆ, ಇಷಯನು ರಾಜನಾದ ದಾವೀದನ ತಂದೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನೆರೆಹೊರೆಯ ಹೆಂಗಸರು ನವೊಮಿಗೆ “ಒಬ್ಬ ಮಗನು ಹುಟ್ಟಿದ್ದಾನೆಂದು” ಹೇಳಿ ಅವನಿಗೆ ಓಬೇದನೆಂದು ಹೆಸರಿಟ್ಟರು. ಇವನೇ ಇಷಯನಿಗೆ ತಂದೆಯೂ, ದಾವೀದನಿಗೆ ಅಜ್ಜನೂ ಆದನು.
Kannada BSI Bible 2016
ಆಗ ನೆರೆಮನೆಯ ಸ್ತ್ರೀಯರು--ನೊವೊಮಿಗೆ ಒಬ್ಬ ಮಗನು ಹುಟ್ಟಿದ್ದಾನೆಂದು ಹೇಳಿ ಅವನಿಗೆ ಓಬೇದನೆಂದು ಹೆಸರಿಟ್ಟರು. ಇವನೇ ದಾವೀದನ ತಂದೆಯಾದ ಇಷಯನಿಗೆ ತಂದೆ ಯಾದವನು.
Kannada BSI JV (ಕನ್ನಡ ಸತ್ಯವೇದವು J.V. (BSI))
ನೆರೆಹೊರೆಯ ಹೆಂಗಸರು ನೊವೊವಿುಗೆ ಒಬ್ಬ ಮಗನು ಹುಟ್ಟಿದ್ದಾನೆಂದು ಹೇಳಿ ಅವನಿಗೆ ಓಬೇದನೆಂದು ಹೆಸರಿಟ್ಟರು. ಇವನೇ ಇಷಯನಿಗೆ ತಂದೆಯೂ ದಾವೀದನಿಗೆ ಅಜ್ಜನೂ ಆದನು.
Kannada Bible (KNCL) BSI 2016
ನೆರೆಹೊರೆಯ ಮಹಿಳೆಯರು, “ನವೊಮಿಗೆ ಕುಲಪುತ್ರನೊಬ್ಬನು ಹುಟ್ಟಿದ್ದಾನೆ!” ಎಂದು ಹೇಳಿ ಆ ಮಗುವಿಗೆ “ಓಬೇದ್” ಎಂದು ಹೆಸರಿಟ್ಟರು. ಇವನೇ ಜೆಸ್ಸೆಯ ತಂದೆ, ದಾವೀದನ ತಾತ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ನೆರೆಹೊರೆಯ ಸ್ತ್ರೀಯರು ನೊವೊಮಿಗೆ, “ಒಬ್ಬ ಮಗನು ಹುಟ್ಟಿದ್ದಾನೆ,” ಎಂದು ಹೇಳಿ ಅವನಿಗೆ ಓಬೇದನೆಂದು ಹೆಸರಿಟ್ಟರು. ಇವನೇ ದಾವೀದನ ತಂದೆಯಾದ ಇಷಯನಿಗೆ ತಂದೆಯಾದವನು.