Ruth 4:7 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
(ಇಸ್ರೇಲರಲ್ಲಿ ಪೂರ್ವಕಾಲದ ಪದ್ಧತಿಯೇನೆಂದರೆ, ಯಾವುದಾದರೊಂದು ವಸ್ತುವನ್ನು ಕೊಂಡುಕೊಳ್ಳುವಾಗಲೂ ತೆಗೆದುಕೊಳ್ಳುವಾಗಲೂ ಮಾತನ್ನು ದೃಢಪಡಿಸುವುದಕ್ಕೋಸ್ಕರ ಒಬ್ಬನು ತನ್ನ ಕೆರವನ್ನು ಮತ್ತೊಬ್ಬನಿಗೆ ಕೊಡುತ್ತಿದ್ದನು.)
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯಾವುದಾದರೊಂದು ವಸ್ತುವನ್ನು ಬಿಡಿಸಿಕೊಳ್ಳುವಾಗಲೂ, ತೆಗೆದುಕೊಳ್ಳುವಾಗಲೂ, ಕೊಡುವಾಗಲೂ ಮಾತನ್ನು ದೃಢಪಡಿಸುವುದಕ್ಕೋಸ್ಕರ ಇಸ್ರಾಯೇಲರಲ್ಲಿ ಪೂರ್ವಕಾಲದಿಂದ ಇದ್ದ ಪದ್ಧತಿ ಯಾವುದಂದರೆ, ಕೊಡುವವನು ತೆಗೆದುಕೊಳ್ಳುವವನಿಗೆ ತನ್ನ ಪಾದರಕ್ಷೆಯನ್ನು ಬಿಚ್ಚಿ ಕೊಡಬೇಕು; ಇದರಿಂದ ಮಾತು ದೃಢವಾಯಿತೆಂದು ಇಸ್ರಾಯೇಲ್ಯರು ತಿಳಿದುಕೊಳ್ಳುವರು.
Kannada BSI Bible 2016
ನಾನು ಬಿಡಿಸಿಕೊಳ್ಳಲಾರೆನು ಅಂದನು. ಬಿಡಿಸಿಕೊಳ್ಳು ವದರಲ್ಲಿಯೂ ಬದಲು ಮಾಡುವದರಲ್ಲಿಯೂ ಸಕಲ ಕಾರ್ಯಗಳೂ ದೃಢವಾಗುವ ಹಾಗೆ ಇಸ್ರಾಯೇಲಿನಲ್ಲಿ ಪೂರ್ವದವಾಡಿಕೆ ಏನಂದರೆ, ಒಬ್ಬನು ತನ್ನ ಕೆರವನ್ನು ತೆಗೆದು ತನ್ನ ನೆರೆಯವನಿಗೆ ಕೊಡುವನು. ಇದು ಇಸ್ರಾಯೇಲಿನಲ್ಲಿ ಸಾಕ್ಷಿಗಾದದ್ದು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯಾವದಾದರೊಂದು ವಸ್ತುವನ್ನು ತೆಗೆದುಕೊಳ್ಳುವಾಗಲೂ ಕೊಡುವಾಗಲೂ ಮಾತನ್ನು ದೃಢಪಡಿಸುವದಕ್ಕೋಸ್ಕರ ಇಸ್ರಾಯೇಲ್ಯರಲ್ಲಿ ಪೂರ್ವಕಾಲದಿಂದಿದ್ದ ಪದ್ಧತಿ ಯಾವದಂದರೆ - ಕೊಡುವವನು ತೆಗೆದುಕೊಳ್ಳುವವನಿಗೆ ತನ್ನ ಕೆರವನ್ನು ಕೊಡುವನು; ಇದರಿಂದ ಮಾತು ದೃಢವಾಯಿತೆಂದು ಇಸ್ರಾಯೇಲ್ಯರು ತಿಳಿದುಕೊಳ್ಳುವರು.
Kannada Bible (KNCL) BSI 2016
ಇಸ್ರಯೇಲರಲ್ಲಿ ಆಸ್ತಿಪಾಸ್ತಿಯನ್ನು ಮಾರಾಟಮಾಡುವಾಗ ಅಥವಾ ವಿನಿಮಯಿಸಿಕೊಳ್ಳುವಾಗ ಒಂದು ಪದ್ಧತಿ ರೂಢಿಯಲ್ಲಿತ್ತು; ಕೊಡುವವನು ಕೊಳ್ಳುವವನಿಗೆ ತನ್ನ ಪಾದರಕ್ಷೆಯನ್ನು ಕೊಡುತ್ತಿದ್ದನು. ಹೀಗೆ ಇಸ್ರಯೇಲರ ಮಧ್ಯೆ ವ್ಯವಹಾರವು ಇತ್ಯರ್ಥವಾಗುತ್ತಿತ್ತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಬಿಡಿಸಿಕೊಳ್ಳುವುದರಲ್ಲಿಯೂ ಬದಲು ಮಾಡುವುದರಲ್ಲಿಯೂ ಸಕಲ ಕಾರ್ಯಗಳೂ ದೃಢವಾಗುವ ಹಾಗೆ ಇಸ್ರಾಯೇಲಿನಲ್ಲಿ ಒಂದು ವಾಡಿಕೆಯಿತ್ತು. ಅದು ಕೊಡುವವನು ಕೊಳ್ಳುವವನಿಗೆ ತನ್ನ ಕೆರವನ್ನು ತೆಗೆದು ತನ್ನ ನೆರೆಯವನಿಗೆ ಕೊಡುತ್ತಿದ್ದನು. ಇದು ಇಸ್ರಾಯೇಲಿನಲ್ಲಿ ವ್ಯವಹಾರವನ್ನು ಕಾನೂನು ಬದ್ಧಗೊಳಿಸುವ ವಿಧಾನವಾಗಿತ್ತು.