Ruth 4:8 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆದ್ದರಿಂದ ಆ ಸಮೀಪಬಂಧುವು, “ನೀನೇ ಹೊಲವನ್ನು ಕೊಂಡುಕೋ” ಎಂದು ಹೇಳಿ ತನ್ನ ಕೆರವನ್ನು ತೆಗೆದು ಬೋವಜನಿಗೆ ಕೊಟ್ಟನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಹಾಗೆಯೇ ಆ ಸಮೀಪಬಂಧುವು ಬೋವಜನಿಗೆ “ನೀನೇ ತೆಗೆದುಕೋ” ಎಂದು ಹೇಳಿ ತನ್ನ ಪಾದರಕ್ಷೆಯನ್ನು ತೆಗೆದುಕೊಟ್ಟನು.
Kannada BSI Bible 2016
ಹಾಗೆಯೇ ಆ ಬಂಧುವು ಬೋವಜನಿಗೆ--ನೀನು ನಿನಗೋಸ್ಕರ ಅದನ್ನು ಕೊಂಡುಕೋ ಎಂದು ತನ್ನ ಕೆರವನ್ನು ತೆಗೆದು ಹಾಕಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಹಾಗೆಯೇ ಆ ಸಮೀಪಬಂಧುವು ಬೋವಜನಿಗೆ - ನೀನೇ ತೆಗೆದುಕೋ ಎಂದು ಹೇಳಿ ತನ್ನ ಕೆರವನ್ನು ತೆಗೆದುಕೊಟ್ಟನು.
Kannada Bible (KNCL) BSI 2016
ಅಂತೆಯೇ ಆ ನೆಂಟನು, “ಹೊಲವನ್ನು ನೀನೇ ಕೊಂಡುಕೊ,” ಎಂದು ಹೇಳಿ ತನ್ನ ಪಾದರಕ್ಷೆಯನ್ನು ಬೋವಜನಿಗೆ ತೆಗೆದುಕೊಟ್ಟನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಹಾಗೆಯೇ ಆ ಬಂಧುವು ಬೋವಜನಿಗೆ, “ನೀನೇ ನಿನಗೋಸ್ಕರ ಅದನ್ನು ಕೊಂಡುಕೋ,” ಎಂದು ತನ್ನ ಕೆರವನ್ನು ತೆಗೆದುಹಾಕಿದನು.