Song of Solomon 1:7 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನನ್ನ ಪ್ರಾಣಪ್ರಿಯನೇ, ನಿನ್ನ ಕುರಿಗಳನ್ನು ಎಲ್ಲಿ ಮೇಯಿಸುವೆ? ಮಧ್ಯಾಹ್ನದಲ್ಲಿ ಅವುಗಳನ್ನು ಎಲ್ಲಿ ಮಲಗಿಸುವೆ? ಮುಸುಕುಹಾಕಿಕೊಂಡು ನಿನ್ನ ಸ್ನೇಹಿತರ ಮಂದೆಗಳ ಹತ್ತಿರ ಅಲೆದಾಡುವ ಹುಡುಗಿಯಂತೆ ನಾನೇಕಿರಬೇಕು?
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನನ್ನ ಪ್ರಾಣಪ್ರಿಯನೇ, ನಿನ್ನ ಮಂದೆಯನ್ನು ಎಲ್ಲಿ ಮೇಯಿಸುವೆ? ನಡುಹಗಲಲ್ಲಿ ನಿನ್ನ ಮಂದೆಯು ಎಲ್ಲಿ ವಿಶ್ರಮಿಸುತ್ತಾರೆ? ಹೇಳು. ನಾನೇಕೆ ಅಲೆಮಾರಿಗಳಂತೆ ನಿನ್ನ ಗೆಳೆಯರ ಮಂದೆಗಳ ಹತ್ತಿರ ಅಲೆಯಬೇಕು?
Kannada BSI Bible 2016
ನನ್ನ ಪ್ರಾಣ ಪ್ರಿಯನೇ, ನೀನು ನಿನ್ನ ಮಂದೆಯನ್ನು ಮೇಯಿಸಿ ಮಧ್ಯಾಹ್ನದಲ್ಲಿ ವಿಶ್ರಮಿಸಿಕೊಳ್ಳುವ ಸ್ಥಳ ಎಲ್ಲಿ ಎಂದು ನನಗೆ ತಿಳಿಸು. ನಾನು ನಿನ್ನ ಜೊತೆಗಾ ರರ ಮಂದೆಗಳ ಬಳಿಯಲ್ಲಿ ಪರಕೀಯಳ ಹಾಗೆ ಇರುವದೇಕೆ?
Kannada BSI JV (ಕನ್ನಡ ಸತ್ಯವೇದವು J.V. (BSI))
ನನ್ನ ಪ್ರಾಣಪ್ರಿಯನೇ, [ಮಂದೆಯನ್ನು] ಎಲ್ಲಿ ಮೇಯಿಸುತ್ತೀ, ಮಧ್ಯಾಹ್ನಕ್ಕೆ ಎಲ್ಲಿ ಮಲಗಿಸುತ್ತೀ? ನನಗೆ ತಿಳಿಸು. ನಾನು ಏಕೆ ನಿನ್ನ ಒಡನಾಡಿಗಳ ಮಂದೆಗಳ ಹತ್ತಿರ ಮುಸುಕಿನವಳಂತಿರಬೇಕು?
Kannada Bible (KNCL) BSI 2016
ನನ್ನ ಪ್ರಾಣಪ್ರಿಯನೇ ಹೇಳು: ನಿನ್ನ ಮಂದೆಯನ್ನು ನೀನು ಮೇಯಿಸುವುದೆಲ್ಲಿ? ನಡುಹಗಲಲ್ಲಿ ಅದು ವಿಶ್ರಮಿಸುವುದೆಲ್ಲಿ? ನಾನೇಕೆ ಅಲೆಯಬೇಕು ಮುಸುಕು ಹಾಕಿದವಳಂತೆ ನಿನ್ನ ಗೆಳೆಯರ ಮಂದೆಗಳ ಹಿಂದೆ? ನಲ್ಲ:
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನನ್ನ ಪ್ರಾಣ ಪ್ರಿಯನೇ, ನೀನು ನಿನ್ನ ಮಂದೆಯನ್ನು ಮೇಯಿಸುವುದು ಎಲ್ಲಿ? ಮಧ್ಯಾಹ್ನದಲ್ಲಿ ನೀನು ವಿಶ್ರಮಿಸಿಕೊಳ್ಳುವ ಸ್ಥಳ ಎಲ್ಲಿ? ನನಗೆ ತಿಳಿಸು. ನಾನು ನಿನ್ನ ಜೊತೆಗಾರರ ಮಂದೆಗಳ ಬಳಿಯಲ್ಲಿ ಮುಸುಕು ಹಾಕಿದವಳಂತೆ ಏಕೆ ಅಲೆಯಬೇಕು?