Song of Solomon 1:8 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಸ್ತ್ರೀಯರಲ್ಲಿ ಅತ್ಯಂತ ರೂಪವತಿಯೇ, ನಿನ್ನ ಪ್ರಿಯನು ಎಲ್ಲಿದ್ದಾನೆಂಬುದು ನಿನಗೆ ಗೊತ್ತಿಲ್ಲದಿದ್ದರೆ, ಹೋಗು, ಕುರಿಗಳನ್ನು ಹಿಂಬಾಲಿಸು. ಕುರುಬರ ಗುಡಾರಗಳ ಬಳಿಯಲ್ಲಿ ನಿನ್ನ ಮೇಕೆಮರಿಗಳನ್ನು ಮೇಯಿಸು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಸ್ತ್ರೀಯರಲ್ಲಿ ಅತಿ ಸುಂದರವಾದ ಹೆಣ್ಣು ನೀನು, ನಿನಗಿದು ಗೊತ್ತಿಲ್ಲವಾದರೆ ಹಿಂಡಿನ ಹೆಜ್ಜೆಯ ಜಾಡನ್ನು ಹಿಡಿದು ಹೋಗಿ, ಕುರುಬರ ಗುಡಾರಗಳ ಬಳಿಯಲ್ಲಿ ನಿನ್ನ ಮೇಕೆಮರಿಗಳನ್ನು ಮೇಯಿಸು.
Kannada BSI Bible 2016
ಓ ಸ್ತ್ರೀಯರಲ್ಲಿ ಸೌಂದರ್ಯವಂತಳೇ, ನೀನು ತಿಳಿಯದೆ ಇದ್ದರೆ ನೀನು ಮಂದೆಯ ಜಾಡೆಯನ್ನು ಹಿಡಿದು ಹೊರಟುಹೋಗಿ ಕುರುಬರ ಗುಡಾರಗಳ ಬಳಿಯಲ್ಲಿ ನಿನ್ನ ಮೇಕೆಯ ಮರಿಗಳನ್ನು ಮೇಯಿಸು.
Kannada BSI JV (ಕನ್ನಡ ಸತ್ಯವೇದವು J.V. (BSI))
ನಾರೀಮಣಿಯೇ, ನಿನಗೆ ಗೊತ್ತಿಲ್ಲವಾದರೆ ಹಿಂಡಿನ ಹೆಜ್ಜೆಯ ಜಾಡನ್ನು ಹಿಡಿದು ಹೋಗಿ ಕುರುಬರ ಗುಡಾರಗಳ ಬಳಿಯಲ್ಲಿ ನಿನ್ನ ಮೇಕೆಮರಿಗಳನ್ನು ಮೇಯಿಸು.
Kannada Bible (KNCL) BSI 2016
ಸ್ತ್ರೀಯರಲ್ಲಿ ಅತಿ ಸುಂದರಿಯೇ, ನಿನಗಿದು ಗೊತ್ತಿಲ್ಲವಾದರೆ ಹೋಗು ಕುರಿಹಿಂಡಿನ ಜಾಡಿನಲ್ಲೆ ಮೇಯಿಸು ನಿನ್ನ ಮೇಕೆಮರಿಗಳನೆ ಕುರುಬರ ಗುಡಾರಗಳ ಸಮೀಪದಲ್ಲೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಸ್ತ್ರೀಯರಲ್ಲಿ ಸೌಂದರ್ಯವಂತಳೇ, ನಿನಗೆ ಗೊತ್ತಿಲ್ಲವಾದರೆ, ನೀನು ಮಂದೆಯ ಜಾಡಿನಲ್ಲಿಯೇ ಹೋಗಿ, ಕುರುಬರ ಗುಡಾರಗಳ ಬಳಿಯಲ್ಲಿ ನಿನ್ನ ಮೇಕೆಯ ಮರಿಗಳನ್ನು ಮೇಯಿಸು.