Song of Solomon 2:13 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಅಂಜೂರದ ಮರ ಕಾಯಿಗಳನ್ನು ಬಿಡುತ್ತಿದೆ; ದ್ರಾಕ್ಷಿಬಳ್ಳಿಯ ಹೂವುಗಳಿಂದ ಸುವಾಸನೆಯು ಬರುತ್ತಿದೆ. ನನ್ನ ಪ್ರಿಯಳೇ, ನನ್ನ ಸುಂದರಿಯೇ, ಎದ್ದೇಳು, ನಾವು ದೂರ ಹೋಗೋಣ!”
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅಂಜೂರದ ಕಾಯಿಗಳು ಹಣ್ಣಾಗಿವೆ, ದ್ರಾಕ್ಷಿಯ ಬಳ್ಳಿಗಳು ಹೂಬಿಟ್ಟಿವೆ, ಅದರ ಪರಿಮಳವನ್ನು ಬೀರುತ್ತಿದೆ. ನನ್ನ ಪ್ರಿಯಳೇ, ಎನ್ನ ಸುಂದರಿಯೇ, ಎದ್ದು ನನ್ನೊಂದಿಗೆ ಬಾ!
Kannada BSI Bible 2016
ಅಂಜೂರದ ಗಿಡವು ಅದರ ಹೀಚುಗಳನ್ನು ಬಿಡುತ್ತದೆ. ದ್ರಾಕ್ಷೇ ಬಳ್ಳಿಗಳ ಹೂವು ಅದರ ಸುವಾಸನೆಯನ್ನು ಕೊಡು ತ್ತದೆ. ಏಳು, ನನ್ನ ಪ್ರಿಯಳೇ, ನನ್ನ ಸುಂದರಿಯೇ, ಹೊರಟು ಬಾ ಎಂಬದು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅಂಜೂರದ ಮರವು ಕಾಯಿಗಳನ್ನು ಪಕ್ವಕ್ಕೆ ತರುತ್ತದೆ, ದ್ರಾಕ್ಷೆಯ ಬಳ್ಳಿಗಳು ಹೂಬಿಟ್ಟು ಪರಿಮಳವನ್ನು ಬೀರುತ್ತವೆ. ನನ್ನ ಪ್ರಿಯಳೇ, ಎನ್ನ ಸುಂದರಿಯೇ, ಎದ್ದು ಬಾ!
Kannada Bible (KNCL) BSI 2016
ಅಂಜೂರದ ಕಾಯಿಗಳು ಹಣ್ಣಾಗಿವೆ ದ್ರಾಕ್ಷಾಬಳ್ಳಿಗಳು ಹೂಬಿಟ್ಟಿವೆ. ಅದರ ಪರಿಮಳ ಹರಡುತ್ತಿದೆ.’ ನಲ್ಲ: ಎದ್ದು ಬಾ, ನನ್ನ ಪ್ರೇಯಸಿಯೇ ಬಾ ನನ್ನೊಂದಿಗೆ, ಸುಂದರಿಯೇ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅಂಜೂರದ ಕಾಯಿಗಳು ಹಣ್ಣಾಗಿವೆ. ದ್ರಾಕ್ಷಿಬಳ್ಳಿಗಳು ಹೂಬಿಟ್ಟಿವೆ. ಅದರ ಪರಿಮಳ ಹರಡುತ್ತಿದೆ. ಎದ್ದು ಬಾ, ನನ್ನ ಪ್ರಿಯಳೇ, ನನ್ನ ಸುಂದರಿಯೇ, ನನ್ನೊಂದಿಗೆ ಬಾ.”