Song of Solomon 2:17 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನನ್ನ ಪ್ರಿಯನು ನೆಲದಾವರೆಗಳ ಮಧ್ಯದಲ್ಲಿ ಮೇಯಿಸುವನು. ನನ್ನ ಪ್ರಿಯನೇ, ಹೊರಡು, ಬೆತೇರ್ ಬೆಟ್ಟಗಳ ಮೇಲೆ ಸಾರಂಗದಂತೆಯೂ ಪ್ರಾಯದ ಜಿಂಕೆಯಂತೆಯೂ ಇರು!
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಕತ್ತಲು ಕಳೆಯುವ ಮೊದಲು, ಹೊತ್ತು ಮೂಡುವ ಮೊದಲು ಹೊರಟು ಬಾ ನನ್ನ ಪ್ರಿಯನೇ, ಬೇತೆರ್ ಪರ್ವತದಲ್ಲಿ ಜಿಂಕೆಯಂತೆಯೂ ಪ್ರಾಯದ ಹರಿಣದಂತೆಯೂ ಇರು.
Kannada BSI Bible 2016
ನನ್ನ ಪ್ರಿಯನೇ, ತಿರುಗಿಕೊಂಡು ಬೆಳಗಾಗು ವವರೆಗೂ ನೆರಳುಗಳು ಓಡಿಹೋಗುವ ವರೆಗೂ, ಬತೇರ್‌ ಪರ್ವತಗಳ ಮೇಲಿರುವ ಜಿಂಕೆಯ ಹಾಗೆ ಇಲ್ಲವೆ ದುಪ್ಪಿಯ ಮರಿಯ ಹಾಗೆ ಇರು.
Kannada BSI JV (ಕನ್ನಡ ಸತ್ಯವೇದವು J.V. (BSI))
ನನ್ನ ಕಾಂತನೇ, ಹೊರಡು, ಹಗಲು ತಂಪಾಗಿ ನೆರಳು ಇಳಿದು ಹೋಗುವ ತನಕ ವಿಯೋಗವೆಂಬ ಪರ್ವತಗಳಲ್ಲಿ ಜಿಂಕೆಯಂತೆಯೂ ಪ್ರಾಯದ ಎರಳೆಯಂತೆಯೂ ಇರು.
Kannada Bible (KNCL) BSI 2016
ಕತ್ತಲು ಕಳೆಯುವ ಮುನ್ನ ಹೊತ್ತು ಮೂಡುವ ಮುನ್ನ ಹೊರಟು ಬಾ, ನನ್ನ ಕಾಂತ ಜಿಂಕೆಯಂತಿರು ಪ್ರಾಯದ ಹುಲ್ಲೆಯಂತಿರು ಬೇತೆರ್ ಪರ್ವತದ ಮೇಲಿರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನನ್ನ ಪ್ರಿಯನೇ, ಹೊತ್ತು ಮೂಡುವ ಮುಂಚೆ ಕತ್ತಲು ಕವಿಯುವ ಮೊದಲು ಹೊರಟು ಬಾ. ಒರಟಾದ ಪರ್ವತಗಳ ಮೇಲಿರುವ ಜಿಂಕೆಯಂತಿರು. ಹೌದು, ಪ್ರಾಯದ ದುಪ್ಪಿಯಂತೆಯೂ ಇರು.