Song of Solomon 2:3 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನನ್ನ ಪ್ರಿಯನೇ, ಕಾಡುಮರಗಳ ನಡುವೆ ಇರುವ ಒಂದು ಸೇಬಿನ ಮರದಂತೆ ನೀನು ಯುವಕರಲ್ಲೆಲ್ಲಾ ಶ್ರೇಷ್ಠನು. ನಾನು ಅವನ ನೆರಳಲ್ಲಿ ಕುಳಿತುಕೊಂಡು ಸಂತೋಷಿಸಿದೆ; ಅವನ ಫಲವು ನನ್ನ ನಾಲಿಗೆಗೆ ಸಿಹಿಯಾಗಿತ್ತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನನ್ನ ಪ್ರಿಯನು ಪುರುಷೋತ್ತಮನು ವನವೃಕ್ಷಗಳ ಮಧ್ಯೆ ಸೇಬಿನ ವೃಕ್ಷದಂತಿಹನು. ಅದರ ಫಲವು ನನ್ನ ನಾಲಿಗೆಗೆ ಸುಮಧುರ ನಾನು ಆತನ ನೆರಳಿನಲ್ಲಿ ಕುಳಿತು ಪರಮಾನಂದಗೊಂಡೆನು.
Kannada BSI Bible 2016
ಅಡವಿಯ ಗಿಡಗಳಲ್ಲಿ ಸೇಬು ಮರ ಹೇಗೋ ಕುಮಾರರಲ್ಲಿ ನನ್ನ ಪ್ರಿಯನು ಹಾಗೆಯೇ. ನಾನು ಅವನ ನೆರಳಿನಲ್ಲಿ ಬಹು ಆನಂದವಾಗಿ ಕುಳಿತು ಕೊಂಡೆನು; ಅವನ ಫಲವು ನನ್ನ ರುಚಿಗೆ ಮಧುರ ವಾಗಿತ್ತು.
Kannada BSI JV (ಕನ್ನಡ ಸತ್ಯವೇದವು J.V. (BSI))
ಉದ್ಯಾನ ವೃಕ್ಷಗಳಲ್ಲಿ ಸೇಬು ಹೇಗೋ ಪುರುಷರಲ್ಲಿ ನನ್ನ ಕಾಂತನು ಹಾಗೆಯೇ ಇಷ್ಟನು. ನಾನು ಅವನ ನೆರಳಿನಲ್ಲಿ ಕೂತು ಸಂತಸಗೊಂಡೆನು, ಅವನ ಫಲವು ನನ್ನ ನಾಲಿಗೆಗೆ ರುಚಿಯಾಗಿತ್ತು.
Kannada Bible (KNCL) BSI 2016
ನನ್ನ ಪ್ರಿಯನು ಪುರುಷೋತ್ತಮನು ವನವೃಕ್ಷಗಳ ಮಧ್ಯೆ ಸೇಬಿನಂತಿಹನು. ಕುಳಿತು ಸಂತೋಷಗೊಂಡೆ ನಾನದರ ನೆರಳಿನೊಳು ಸಿಹಿ ನನ್ನ ನಾಲಿಗೆಗೆ ಅದರ ಫಲವು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅಡವಿಯ ಮರಗಳಲ್ಲಿ ಸೇಬಿನ ಮರದಂತೆ ಯುವಜನರಲ್ಲಿ ನನ್ನ ಪ್ರಿಯನಿದ್ದಾನೆ. ನಾನು ಅವನ ನೆರಳಿನಲ್ಲಿ ಬಹು ಆನಂದವಾಗಿ ಕುಳಿತುಕೊಂಡೆನು. ಅವನ ಫಲವು ನನ್ನ ರುಚಿಗೆ ಮಧುರವಾಗಿತ್ತು.