Song of Solomon 2:9 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನನ್ನ ಪ್ರಿಯನು ಸಾರಂಗದಂತೆಯೂ ಪ್ರಾಯದ ಜಿಂಕೆಯಂತೆಯೂ ಇದ್ದಾನೆ. ಅಗೋ, ಅವನು ನಮ್ಮ ಗೋಡೆಯ ಆಚೆ ನಿಂತಿದ್ದಾನೆ; ತಡಕೆಗಳಿಂದ ಇಣಿಕಿಹಾಕುತ್ತಿದ್ದಾನೆ; ಕಿಟಕಿಗಳಿಂದ ನೋಡುತ್ತಿದ್ದಾನೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನನ್ನ ಪ್ರಿಯನು ಜಿಂಕೆಯಂತೆಯೂ ಪ್ರಾಯದ ಹರಿಣದಂತೆಯೂ ಇದ್ದಾನೆ. ಆಹಾ, ಇಗೋ ನಮ್ಮ ಗೋಡೆಯ ಆಚೆ ನಿಂತು, ಕಿಟಕಿಗಳ ಮೂಲಕ ನೋಡುತ್ತಾನೆ, ಜಾಲಾಂದ್ರಗಳ ಮೂಲಕ ಇಣಿಕುಹಾಕುತ್ತಾನೆ!
Kannada BSI Bible 2016
ನನ್ನ ಪ್ರಿಯನು ಜಿಂಕೆಯ ಹಾಗೆ ಇಲ್ಲವೆ ದುಪ್ಪಿಯ ಮರಿಯ ಹಾಗೆ ಇದ್ದಾನೆ. ಇಗೋ, ಅವನು ನಮ್ಮ ಗೋಡೆಯ ಹಿಂದೆ ನಿಂತು ಜಲಾಂತರಗಳಿಂದ ತನ್ನನ್ನು ತೋರಿಸಿ ಕಿಟಕಿಗಳಿಂದ ನೋಡುತ್ತಾನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಎನ್ನಿನಿಯನು ಜಿಂಕೆಯಂತೆಯೂ ಪ್ರಾಯದ ಎರಳೆಯ ಹಾಗೂ ಇದ್ದಾನೆ. ಆಹಾ, ನಮ್ಮ ಗೋಡೆಯ ಆಚೆ ನಿಂತಿದ್ದಾನೆ, ಕಿಟಕಿಗಳಲ್ಲಿ ನೋಡುತ್ತಾನೆ, ಜಾಲಾಂತರಗಳಲ್ಲಿ ಇಣಿಕುಹಾಕುತ್ತಾನೆ!
Kannada Bible (KNCL) BSI 2016
ನನ್ನ ಪ್ರಿಯನು ಇಹನು ಜಿಂಕೆಯಂತೆ, ಎಳೆಯ ಹುಲ್ಲೆಯಂತೆ ಇಗೋ, ನಿಂತಿಹನು ಗೋಡೆಯ ಹಿಂಭಾಗದಲೆ, ದೃಷ್ಟಿಸಿ ನೋಡುತಿಹನು ಕಿಟಕಿಗಳಲಿ ಇಣುಕು ಹಾಕುತಿಹನು ಜಾಲಾಂತರಗಳಲಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನನ್ನ ಪ್ರಿಯನು ಜಿಂಕೆಯ ಹಾಗೆ ಇದ್ದಾನೆ. ದುಪ್ಪಿಯ ಮರಿಯ ಹಾಗೆಯೂ ಇದ್ದಾನೆ. ಇಗೋ! ಅವನು ನಮ್ಮ ಗೋಡೆಯ ಹಿಂದೆ ನಿಂತಿದ್ದಾನೆ. ಜಾಲಾಂತರಗಳಲ್ಲಿ ತನ್ನನ್ನು ತೋರಿಸಿ, ಕಿಟಿಕಿಗಳಿಂದ ನೋಡುತ್ತಿದ್ದಾನೆ.