Song of Solomon 3:1 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ರಾತ್ರಿಯಲ್ಲಿಯೂ ನನ್ನ ಪ್ರಾಣಪ್ರಿಯನಿಗಾಗಿ ಹಾಸಿಗೆಯ ಮೇಲೆ ಹುಡುಕಿದೆನು. ಎಷ್ಟು ಹುಡುಕಿದರೂ ಅವನು ಸಿಕ್ಕಲಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ರಾತ್ರಿಯಲ್ಲಿ ಹಾಸಿಗೆಯ ಮೇಲೆ ನನ್ನ ಪ್ರಾಣಪ್ರಿಯನನ್ನು ಹುಡುಕಿದೆನು, ಎಷ್ಟು ಹುಡುಕಿದರೂ ಸಿಕ್ಕಲಿಲ್ಲ.
Kannada BSI Bible 2016
ರಾತ್ರಿಯಲ್ಲಿ ನನ್ನ ಹಾಸಿಗೆಯ ಮೇಲೆ ನನ್ನ ಪ್ರಾಣ ಪ್ರಿಯನನ್ನು ಹುಡುಕಿದೆನು; ಅವನನ್ನು ಹುಡುಕಿದೆನು, ಆದರೆ ಕಾಣದೆಹೋದೆನು.
Kannada BSI JV (ಕನ್ನಡ ಸತ್ಯವೇದವು J.V. (BSI))
ರಾತ್ರಿ ರಾತ್ರಿಯಲ್ಲಿಯೂ ಹಾಸಿಗೆಯ ಮೇಲೆ ನನ್ನ ಪ್ರಾಣಪ್ರಿಯನನ್ನು ಹುಡುಕಿದೆನು; ಎಷ್ಟು ಹುಡುಕಿದರೂ ಸಿಕ್ಕಲಿಲ್ಲ.
Kannada Bible (KNCL) BSI 2016
ನಲ್ಲೆ: ನನ್ನ ಪ್ರಾಣಕಾಂತನನ್ನು ರಾತ್ರಿಯೆಲ್ಲಾ ಹುಡುಕಿದೆ ಹಾಸಿಗೆಯ ಮೇಲೆ ಹಾತೊರೆದೆ ಹುಡುಕಿ ಹುಡುಕಿ ಸಿಗಲಾರದೆ ಬೇಸತ್ತೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ರಾತ್ರಿಯೆಲ್ಲಾ ನನ್ನ ಹಾಸಿಗೆಯ ಮೇಲಿದ್ದೆನು; ನನ್ನ ಪ್ರಾಣ ಪ್ರಿಯನನ್ನು ಹುಡಕಿದೆನು. ಅವನನ್ನು ಎಷ್ಟು ಹುಡುಕಿದರೂ ಅವನು ಸಿಗಲಿಲ್ಲ.