Song of Solomon 3:10 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಅದರ ಕಂಬಗಳನ್ನು ಬೆಳ್ಳಿಯಿಂದಲೂ ಅದರ ಅಡ್ಡಕಂಬಗಳನ್ನು ಚಿನ್ನದಿಂದಲೂ ಮಾಡಲಾಗಿದೆ. ಅದರ ಆಸನವನ್ನು ನೇರಳೆ ಬಣ್ಣದ ಬಟ್ಟೆಯಿಂದ ಹೊದಿಸಲಾಗಿದೆ. ಆ ಬಟ್ಟೆಯನ್ನು ಜೆರುಸಲೇಮಿನ ಸ್ತ್ರೀಯರು ಕಸೂತಿ ಕೆಲಸದಿಂದ ಅಲಂಕರಿಸಿದ್ದಾರೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅದರ ಕಂಬಗಳನ್ನು ಬೆಳ್ಳಿಯಿಂದಲೂ, ಕುಳಿತು ಒರಗಿಕೊಳ್ಳುವ ಆಸನವನ್ನು ಬಂಗಾರದಿಂದಲೂ, ಆಸನವನ್ನು ಧೂಮ್ರವರ್ಣದ ವಸ್ತ್ರದಿಂದ ಮಾಡಿಸಿದನು. ಅದರ ಮಧ್ಯಭಾಗವನ್ನು ಯೆರೂಸಲೇಮಿನ ಪುತ್ರಿಯರು ತಮ್ಮ ಪ್ರೀತಿಗೆ ಗುರುತಾಗಿ ಕಸೂತಿಯಿಂದ ಅಲಂಕರಿಸಿದರು.
Kannada BSI Bible 2016
ಅವನು ಅದರ ಸ್ತಂಭಗಳನ್ನು ಬೆಳ್ಳಿಯಿಂದಲೂ ಕೆಳಗಿನ ಭಾಗವನ್ನು ಬಂಗಾರದಿಂದಲೂ ಹೊದಿಕೆ ಯನ್ನು ಧೂಮ್ರ ವರ್ಣದ ವಸ್ತ್ರದಿಂದಲೂ ಮಾಡಿ ಸಿದನು. ಯೆರೂಸಲೇಮಿನ ಕುಮಾರ್ತೆಯರ ನಿಮಿತ್ತ ಅದರ ಮಧ್ಯದಲ್ಲಿದ್ದದ್ದು ಪ್ರೀತಿಯಿಂದ ಹಾಸಲ್ಪಟ್ಟಿತು.ಚೀಯೋನಿನ ಕುಮಾರ್ತೆಯರೇ, ನೀವು ಹೊರಟು ಹೋಗಿ ಅವನ ಮದುವೆಯ ದಿವಸದಲ್ಲಿಯೂ ಹೃದ ಯದ ಸಂತೋಷದ ದಿವಸದಲ್ಲಿಯೂ ತನ್ನ ತಾಯಿ ತನಗೆ ಧರಿಸಿದ ಕಿರೀಟ ಇರುವ ಅರಸನಾದ ಸೊಲೊ ಮೋನನನ್ನು ನೋಡಿರಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ಅದರ ಕಂಬಗಳನ್ನು ಬೆಳ್ಳಿಯಿಂದ, ಒರಗನ್ನು ಚಿನ್ನದಿಂದ, ಆಸನವನ್ನು ಸಕಲಾತಿಯಿಂದ ಮಾಡಿಸಿದನು; ಮಧ್ಯಭಾಗವನ್ನು ಯೆರೂಸಲೇವಿುನ ಸ್ತ್ರೀಯರು ತಮ್ಮ ಪ್ರೀತಿಗೆ ಗುರುತಾಗಿ ನಕಾಸಿಯಿಂದ ಅಲಂಕರಿಸಿದರು.
Kannada Bible (KNCL) BSI 2016
ಸ್ತಂಭಗಳನ್ನು ಬೆಳ್ಳಿಯಿಂದ ಒರಗನ್ನು ಬಂಗಾರದಿಂದ ಅದರ ಮೆತ್ತೆಯನ್ನು ಸಕಲಾತಿಯಿಂದ ಅಲಂಕರಿಸಿಹರು ಜೆರುಸಲೇಮಿನ ಮಹಿಳೆಯರು ಪ್ರೀತಿಯಿಂದ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವನು ಅದರ ಸ್ತಂಭಗಳನ್ನು ಬೆಳ್ಳಿಯಿಂದಲೂ ಅದರ ಕೆಳಗಿನ ಭಾಗವನ್ನು ಬಂಗಾರದಿಂದಲೂ ಅದರ ಹೊದಿಕೆಯನ್ನು ಧೂಮ್ರವರ್ಣದ ವಸ್ತ್ರದಿಂದಲೂ ಮಾಡಿಸಿದ್ದನು. ಯೆರೂಸಲೇಮಿನ ಪುತ್ರಿಯರು ಪ್ರೀತಿಯಿಂದ ಅದನ್ನು ಅಲಂಕರಿಸಿದ್ದರು.