Song of Solomon 3:11 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಚೀಯೋನಿನ ಸ್ತ್ರೀಯರೇ, ಹೊರಗೆ ಹೋಗಿ ರಾಜನಾದ ಸೊಲೊಮೋನನನ್ನು ನೋಡಿರಿ. ಅವನ ಮದುವೆಯ ದಿನದಲ್ಲಿ ಹೃದಯವು ಹರ್ಷಗೊಂಡಿದ್ದಾಗ ಅವನ ತಾಯಿ ತಲೆಗಿಟ್ಟ ಕಿರೀಟವನ್ನು ಧರಿಸಿಕೊಂಡಿದ್ದಾನೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಚೀಯೋನಿನ ಮಹಿಳೆಯರೇ, ಹೊರಟು ಬನ್ನಿ ರಾಜನಾದ ಸೊಲೊಮೋನನನ್ನು ನೋಡ ಬನ್ನಿ. ಅವನು ವಿವಾಹ ದಿನದ ಉತ್ಸವದಂದು ಆತನ ತಾಯಿ ಆತನಿಗೆ ತೊಡಿಸಿದ ಕಿರೀಟವನ್ನು ಆತ ಧರಿಸಿರುವುದನ್ನು ನೋಡಬನ್ನಿ!
Kannada BSI Bible 2016
ಚೀಯೋನಿನ ಕುಮಾರ್ತೆಯರೇ, ನೀವು ಹೊರಟು ಹೋಗಿ ಅವನ ಮದುವೆಯ ದಿವಸದಲ್ಲಿಯೂ ಹೃದ ಯದ ಸಂತೋಷದ ದಿವಸದಲ್ಲಿಯೂ ತನ್ನ ತಾಯಿ ತನಗೆ ಧರಿಸಿದ ಕಿರೀಟ ಇರುವ ಅರಸನಾದ ಸೊಲೊ ಮೋನನನ್ನು ನೋಡಿರಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ಚೀಯೋನಿನ ನಾರಿಯರೇ, ಹೊರಟು ಹೋಗಿ ರಾಜನಾದ ಸೊಲೊಮೋನನನ್ನು ನೋಡಿರಿ. ಅವನು ವಿವಾಹವಾಗಿ ಉಲ್ಲಾಸಪಟ್ಟ ದಿನದಲ್ಲಿ ತಾಯಿಯು ಅವನ ತಲೆಗಿಟ್ಟ ಕಿರೀಟವನ್ನು ಧರಿಸಿಕೊಂಡಿದ್ದಾನೆ.
Kannada Bible (KNCL) BSI 2016
ಸಿಯೋನಿನ ಮಹಿಳೆಯರೇ, ಹೊರಟುಬನ್ನಿ ಅರಸ ಸೊಲೊಮೋನನನ್ನು ನೋಡಬನ್ನಿ ಆತನ ವಿವಾಹಮಹೋತ್ಸವ ದಿನದಂದು ಆತನ ತಾಯಿ ತೊಡಿಸಿದ ಮುಕುಟವನ್ನು ಆತ ಧರಿಸಿರುವುದನ್ನು ನೋಡಬನ್ನಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಚೀಯೋನಿನ ಪುತ್ರಿಯರೇ, ನೀವು ಹೊರಗೆ ಬನ್ನಿರಿ. ಅರಸನಾದ ಸೊಲೊಮೋನನನ್ನು ನೋಡಿರಿ. ಅವನ ಮದುವೆಯ ದಿನದಂದು, ಅವನ ಹೃದಯ ಸಂತೋಷಗೊಂಡ ದಿನದಲ್ಲಿ, ಅವನ ತಾಯಿ ಅವನಿಗೆ ತೊಡಿಸಿದ ಕಿರೀಟವನ್ನು ಅವನು ಧರಿಸಿರುವುದನ್ನು ಬಂದು ನೋಡಿರಿ.