Song of Solomon 3:4 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಅಲ್ಲಿಂದ ಸ್ವಲ್ಪದೂರ ಹೋದಾಗ, ನನ್ನ ಪ್ರಿಯನನ್ನು ಕಂಡು ಅಪ್ಪಿಕೊಂಡೆ. ನನ್ನ ತಾಯಿಯ ಮನೆಗೆ, ಅಂದರೆ ನನ್ನನ್ನು ಹೆತ್ತವಳ ಕೋಣೆಗೆ ಸೇರುವತನಕ ಅವನನ್ನು ಬಿಡದೆ ಹಿಡಿದುಕೊಂಡೇ ಹೋದೆನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವರನ್ನು ಬಿಟ್ಟ ತುಸು ಹೊತ್ತಿನೊಳಗೆ ನನ್ನ ಪ್ರಾಣಪ್ರಿಯನನ್ನು ಕಂಡುಕೊಂಡು ತಾಯಿಯ ಮನೆಗೆ, ನನ್ನನ್ನು ಹೆತ್ತವಳ ಕೋಣೆಗೆ ಸೇರುವ ತನಕ, ಬಿಡದೆ ಹಿಡಿದುಕೊಂಡೇ ಹೋದೆನು.
Kannada BSI Bible 2016
ನಾನು ಅವರನ್ನು ಬಿಟ್ಟು ಸ್ವಲ್ಪ ಆಚೆಗೆ ಹೋದ ತರುವಾಯ, ನನ್ನ ಪ್ರಾಣಪ್ರಿಯನನ್ನು ಕಂಡೆನು. ನಾನು ಅವನನ್ನು ಹಿಡುಕೊಂಡು ನನ್ನ ತಾಯಿಯ ಮನೆಗೂ ನನ್ನನ್ನು ಹೆತ್ತವಳ ಕೊಠಡಿಗೂ ಅವನನ್ನು ಕರತರುವ ವರೆಗೆ ಹೋಗಗೊಡಿಸಲಿಲ್ಲ.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವರನ್ನು ಬಿಟ್ಟ ತುಸು ಹೊತ್ತಿನೊಳಗೆ ನನ್ನ ಪ್ರಾಣಪ್ರಿಯನನ್ನು ಕಂಡುಕೊಂಡು ತಾಯಿಯ ಮನೆಗೆ, ನನ್ನನ್ನು ಹೆತ್ತವಳ ಕೋಣೆಗೆ, ಸೇರುವ ತನಕ ಬಿಡದೆ ಹಿಡಿದುಕೊಂಡೇ ಹೋದೆನು.
Kannada Bible (KNCL) BSI 2016
ಅವರನ್ನು ಬಿಟ್ಟ ತುಸು ಹೊತ್ತಿನಲ್ಲೆ ನನ್ನ ಪ್ರಾಣಕಾಂತನನ್ನು ಕಂಡುಕೊಂಡೆ. ತಾಯ ಮನೆಗೆ, ನನ್ನ ಹೆತ್ತವಳ ಮನೆಗೆ ಕರೆದೊಯ್ದೆ ಕೈಯ ಬಿಡದೆಯೆ ಕರೆದುಕೊಂಡು ಹೋದೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಾನು ಅವರನ್ನು ಬಿಟ್ಟು ಸ್ವಲ್ಪ ದೂರ ಹೋದ ಮೇಲೆ, ನನ್ನ ಪ್ರಾಣ ಪ್ರಿಯನನ್ನು ಕಂಡುಕೊಂಡೆನು. ನಾನು ಅವನ ಕೈಯನ್ನು ಹಿಡಿದುಕೊಂಡು ನನ್ನ ತಾಯಿಯ ಮನೆಗೆ, ಹೌದು, ನನ್ನ ಹೆತ್ತವಳ ಕೋಣೆಗೆ ಅವನನ್ನು ಬಿಡದೆ ಕರೆದುಕೊಂಡು ಹೋದೆನು.