Song of Solomon 3:5 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಜೆರುಸಲೇಮಿನ ಸ್ತ್ರೀಯರೇ, ತಕ್ಕಕಾಲಕ್ಕೆ ಮೊದಲೇ ಪ್ರೀತಿಯನ್ನು ಹುಟ್ಟಿಸಿ, ಬೆಳೆಯಿಸುವುದಿಲ್ಲವೆಂದು ಜಿಂಕೆಗಳ ಮೇಲೆಯೂ ಕಾಡುಹುಲ್ಲೆಗಳ ಮೇಲೆಯೂ ನನಗೆ ಪ್ರಮಾಣಮಾಡಿರಿ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೆರೂಸಲೇಮಿನ ಮಹಿಳೆಯರೇ, ಆತನು ತಾನಾಗಿ ಎಚ್ಚರಗೊಳ್ಳುವವರೆಗೆ ಯಾರೂ ನನ್ನ ಪ್ರಿಯನನ್ನು ಎಚ್ಚರಿಸದಿರಿ, ಆತನ ವಿಶ್ರಾಂತಿಗೆ ಯಾರೂ ಭಂಗ ಮಾಡದಿರಿ ಎಂದು ವನದ ಜಿಂಕೆ ಹರಿಣಗಳ ಮೇಲೆ ನಿಮ್ಮಿಂದ ಪ್ರಮಾಣಮಾಡಿಸುತ್ತೇನೆ.
Kannada BSI Bible 2016
ಯೆರೂಸಲೇಮಿನ ಕುಮಾರ್ತೆಯರೇ, ನನ್ನ ಪ್ರಿಯನು ಮೆಚ್ಚುವ ವರೆಗೆ ನೀವು ನನ್ನ ಪ್ರೀತಿಯನ್ನು ಎಬ್ಬಿಸಬೇಡಿರಿ, ಎಚ್ಚರಿಸಬೇಡಿರಿ ಎಂದು ಅಡವಿಯ ಜಿಂಕೆಗಳಿಂದಲೂ ದುಪ್ಪಿಗಳಿಂದಲೂ ನಿಮಗೆ ಆಜ್ಞಾಪಿಸುತ್ತೇನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೆರೂಸಲೇವಿುನ ಸ್ತ್ರೀಯರೇ, ಉಚಿತ ಕಾಲಕ್ಕೆ ಮುಂಚೆ ಪ್ರೀತಿಯನ್ನು ಹುಟ್ಟಿಸಿ ಬೆಳೆಯಿಸಬಾರದೆಂದು ಅಡವಿಯ ಹುಲ್ಲೆಗಳ ಮೇಲೆಯೂ ಹರಿಣಿಗಳ ಮೇಲೆಯೂ ನಿಮ್ಮಿಂದ ಪ್ರಮಾಣ ಮಾಡಿಸುತ್ತೇನೆ.
Kannada Bible (KNCL) BSI 2016
ಜೆರುಸಲೇಮಿನ ಮಹಿಳೆಯರೇ, “ತಾನೇ ಏಳುವುದಕ್ಕೆ ಮುಂಚೆ ನನ್ನ ಪ್ರಿಯನನ್ನು ಎಚ್ಚರಿಸದಿರಿ ಆತನ ವಿಶ್ರಾಂತಿಗೆ ಭಂಗ ತರದಿರಿ” ಎಂದು ನಿಮಗೆ ವಿಧಿಸಿರುವೆನು ವನದ ಹುಲ್ಲೆ ಹರಿಣಿಗಳ ಮೇಲೆ ಆಣೆಯಿಟ್ಟು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೆರೂಸಲೇಮಿನ ಪುತ್ರಿಯರೇ, ಮೆಚ್ಚುವ ಕಾಲಕ್ಕೆ ಮುಂಚೆ ನೀವು ಪ್ರೀತಿಯನ್ನು ಎಬ್ಬಿಸಬೇಡಿರಿ. ಎಚ್ಚರಿಸಲೂ ಬೇಡಿರಿ ಎಂದು ಅಡವಿಯ ಹುಲ್ಲೆ ಹರಿಣಿಗಳ ಮೇಲೆ ನಿಮ್ಮಿಂದ ಪ್ರಮಾಣಮಾಡಿಸುತ್ತೇನೆ.