Song of Solomon 4:11 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನನ್ನ ವಧುವೇ, ನಿನ್ನ ತುಟಿಗಳು ಜೇನುಗರೆಯುತ್ತವೆ; ಹಾಲೂ ಜೇನೂ ನಿನ್ನ ನಾಲಿಗೆಯೊಳಗಿವೆ. ನಿನ್ನ ಬಟ್ಟೆಗಳು ಪರಿಮಳದ್ರವ್ಯದಂತೆ ಸುವಾಸನೆಭರಿತವಾಗಿವೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ವಧುವೇ, ನಿನ್ನ ತುಟಿಗಳು ಜೇನುಗರೆಯುತ್ತವೆ; ಜೇನೂ ಮತ್ತು ಹಾಲೂ ನಿನ್ನ ನಾಲಿಗೆಯ ಅಡಿಯಲ್ಲಿವೆ, ನಿನ್ನ ಉಡುಪುಗಳು ಲೆಬನೋನಿನ ಸುಗಂಧ ಸೂಸುತ್ತಿದೆ.
Kannada BSI Bible 2016
ನಿನ್ನ ತುಟಿಗಳು, ಓ ನನ್ನ ವಧುವೇ, ಜೇನುಗೂಡಿನ ಹಾಗೆ ಸುರಿಯುತ್ತವೆ; ಹಾಲೂ ಜೇನೂ ನಿನ್ನ ನಾಲಿಗೆಯ ಕೆಳಗೆ ಅವೆ; ನಿನ್ನ ವಸ್ತ್ರಗಳ ವಾಸನೆಯು ಲೆಬನೋನಿನ ವಾಸನೆಯ ಹಾಗೆ ಅವೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ವಧುವೇ, ನಿನ್ನ ತುಟಿಗಳು ಜೇನುಗರೆಯುತ್ತವೆ; ಜೇನೂ ಹಾಲೂ ನಿನ್ನ ನಾಲಿಗೆಯೊಳಗಿವೆ; ನಿನ್ನ ವಸ್ತ್ರಗಳ ಸುವಾಸನೆಯೋ ಲೆಬನೋನಿನ ಪರಿಮಳವೇ.
Kannada Bible (KNCL) BSI 2016
ನನ್ನ ವಧುವೇ, ಜೇನು ಸುರಿಯುತ್ತಿದೆ ನಿನ್ನ ತುಟಿಗಳಿಂದ ಹಾಲುಜೇನು ಬರುತ್ತಿದೆ ನಿನ್ನ ನಾಲಗೆಯಡಿಯಿಂದ ಲೆಬನೋನಿನ ಸುಗಂಧ ಸೂಸುತ್ತಿದೆ ನಿನ್ನ ಉಡುಪಿನಿಂದ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನನ್ನ ವಧುವೇ, ನಿನ್ನ ತುಟಿಗಳಿಂದ ಜೇನು ಸುರಿಯುತ್ತಿದೆ. ಹಾಲೂ, ಜೇನೂ ನಿನ್ನ ನಾಲಿಗೆ ಅಡಿಯಲ್ಲಿವೆ. ನಿನ್ನ ವಸ್ತ್ರಗಳ ಸುವಾಸನೆಯು ಲೆಬನೋನಿನ ಸುಗಂಧದಂತಿದೆ.