Song of Solomon 4:12 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನನ್ನ ಪ್ರಿಯಳೇ, ನನ್ನ ವಧುವೇ, ನೀನು ಕದಹಾಕಿದ ತೋಟದಂತಿರುವೆ; ಬೇಲಿಯೊಳಗಿರುವ ಬುಗ್ಗೆಯಂತಿರುವೆ; ಮುಚ್ಚಿ ಮುದ್ರಿಸಿದ ಚಿಲುಮೆಯಂತಿರುವೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನನ್ನ ಪ್ರಿಯಳು, ನನ್ನ ಮದಲಗಿತ್ತಿಯು, ಸುಭದ್ರವಾದ ಉದ್ಯಾನ, ಬೇಲಿಯೊಳಗೆ ಮುಚ್ಚಿ ಮುದ್ರಿಸಿದ ಚಿಲುಮೆ.
Kannada BSI Bible 2016
ನನ್ನ ಸಹೋದರಿಯು, ಪತ್ನಿಯು, ಮುಚ್ಚಲ್ಪಟ್ಟ ತೋಟವೂ ಮುಚ್ಚಲ್ಪಟ್ಟ ಒರತೆಯೂ ಮುದ್ರೆ ಹಾಕಲ್ಪಟ್ಟ ಬುಗ್ಗೆಯೂ ಆಗಿದ್ದಾಳೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ನನ್ನ ಪ್ರಿಯಳು, ನನ್ನ ಮದಲಗಿತ್ತಿಯು, ಅಗುಳಿ ಹಾಕಿದ ಉದ್ಯಾನ, ಬೇಲಿಯೊಳಗಿನ ಬುಗ್ಗೆ, ಮುಚ್ಚಿ ಮುದ್ರಿಸಿದ ಬಾವಿ ಆಗಿದ್ದಾಳೆ.
Kannada Bible (KNCL) BSI 2016
ನನ್ನ ಪ್ರಿಯಳು, ನನ್ನ ಮದಲಗಿತ್ತಿ ಸುಭದ್ರವಾದ ಉದ್ಯಾನವನ ಬೇಲಿಯೊಳಗಿನ ಬುಗ್ಗೆ ಮುಚ್ಚಿ ಮುದ್ರಿಸಿದ ಚಿಲುಮೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನನ್ನ ಪ್ರಿಯಳೇ, ನನ್ನ ವಧುವೇ, ನೀನು ಭದ್ರ ತೋಟವೂ ಬೇಲಿಯೊಳಗಿನ ಬುಗ್ಗೆಯೂ ಮುದ್ರಿಸಿದ ಬಾವಿಯೂ ಆಗಿರುವೆ.