Song of Solomon 4:15 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನೀನು ತೋಟದ ಬುಗ್ಗೆಯಂತಿರುವೆ; ಹೊಸ ನೀರಿನ ಬಾವಿಯಂತಿರುವೆ; ಲೆಬನೋನಿನ ಬೆಟ್ಟಗಳಿಂದ ಹರಿದುಬರುತ್ತಿರುವ ನೀರಿನಂತಿರುವೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಉದ್ಯಾನಗಳಿಗೆ ಹಾದು ಹೋಗುವ ಬುಗ್ಗೆ, ಉಕ್ಕುತ್ತಿರುವ ಬಾವಿ, ಲೆಬನೋನಿನಿಂದ ಹರಿಯುವ ಕಾಲುವೆ ನಿನ್ನಲ್ಲಿವೆ.
Kannada BSI Bible 2016
ಸಮಸ್ತ ಮುಖ್ಯವಾದ ಸುಗಂಧದ್ರವ್ಯ ಗಳೂ ತೋಟಗಳ ಬುಗ್ಗೆಯೂ ಜೀವಜಲಗಳ ಬಾವಿಯೂ ಲೆಬನೋನಿನಿಂದ ಹರಿಯುವ ಕಾಲುವೆ ಗಳೂ ನಿನ್ನಲ್ಲಿ ಇವೆ.ಓ ಉತ್ತರ ಗಾಳಿಯೇ, ಎಚ್ಚರವಾಗು! ದಕ್ಷಿಣ ಗಾಳಿಯೇ, ಬಾ! ನನ್ನ ತೋಟದ ಮೇಲೆ ಬೀಸು; ಅದರ ಸುಗಂಧಗಳು ಹರಿಯಲಿ. ನನ್ನ ಪ್ರಿಯನು ತನ್ನ ತೋಟದಲ್ಲಿ ಬಂದು ತನ್ನ ರಮ್ಯವಾದ ಫಲಗ ಳನ್ನು ತಿನ್ನಲಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ಉದ್ಯಾನಗಳಿಗೆ ಹಾಯುವ ಬುಗ್ಗೆ, ಉಕ್ಕುತ್ತಿರುವ ಬಾವಿ, ಲೆಬನೋನಿನಿಂದ ಹರಿಯುವ ಪ್ರವಾಹ, ಇವೆಲ್ಲವೂ ನಿನ್ನಲ್ಲಿವೆ.
Kannada Bible (KNCL) BSI 2016
ನಿನ್ನ ತೋಟಗಳಿಗೆ ಬೇಕಾದ ಬುಗ್ಗೆ, ಉಕ್ಕಿಬರುವ ಒರತೆ, ಲೆಬನೋನಿನಿಂದ ಹರಿಯುವ ಕಾಲುವೆ ನಿನ್ನಲ್ಲಿವೆ ನಲ್ಲೆ:
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನೀನು ತೋಟದ ಬುಗ್ಗೆಯೂ ಉಕ್ಕಿಬರುವ ಒರತೆಯೂ ಲೆಬನೋನಿನಿಂದ ಹರಿಯುವ ಹೊಳೆಯೂ ಆಗಿರುವೆ.