Song of Solomon 4:2 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನಿನ್ನ ಹಲ್ಲುಗಳು ಉಣ್ಣೆ ಕತ್ತರಿಸಿದ ನಂತರ ಸ್ನಾನ ಮಾಡಿಕೊಂಡು ತಮ್ಮ ಜೋಡಿಗಳನ್ನು ಕಳೆದುಕೊಳ್ಳದೆ ಜೊತೆಜೊತೆಯಾಗಿ ಬರುವ ಕುರಿಮಂದೆಯಂತಿವೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಉಣ್ಣೆ ಕತ್ತರಿಸಿ ಸ್ನಾನಮಾಡಿಸಿದ ಕುರಿಮಂದೆಯ ಬಿಳುಪಿನಂತಿವೆ ನಿನ್ನ ಹಲ್ಲುಗಳು, ಯಾವುದೂ ಒಂಟಿಯಾಗಿರದೆ ಎಲ್ಲವೂ ಒಟ್ಟಾಗಿ ಜೋಡಿಯಾಗಿವೆ.
Kannada BSI Bible 2016
ನಿನ್ನ ಹಲ್ಲುಗಳು ತೊಳೆಯಲ್ಪಟ್ಟು ಮೇಲಕ್ಕೆ ಬರುವ ಉಣ್ಣೆ ಕತ್ತರಿಸಿದ ಕುರಿಮಂದೆಗೆ ಸಮಾನವಾಗಿವೆ; ಅವೆಲ್ಲಾ ಅವಳಿ ಜವಳಿ ಈಯುತ್ತವೆ; ಅವುಗಳಲ್ಲಿ ಒಂದೂ ಬಂಜೆಯಾಗಿರದು.
Kannada BSI JV (ಕನ್ನಡ ಸತ್ಯವೇದವು J.V. (BSI))
ನಿನ್ನ ಹಲ್ಲುಗಳೋ ತೊಳೆಯಲ್ಪಟ್ಟು ಉಣ್ಣೆ ಕತ್ತರಿಸಿಕೊಂಡ ಕೂಡಲೇ ಯಾವದೂ ತನ್ನ ಜೊತೆಯನ್ನು ಕಳೆದುಕೊಳ್ಳದೆ ಜೋಡಿಯಾಗಿ ಮೇಲಕ್ಕೆ ಬರುವ ಕುರಿಯ ಮಂದೆಯ ಹಾಗಿವೆ.
Kannada Bible (KNCL) BSI 2016
ನಿನ್ನ ಹಲ್ಲುಗಳ ಹೊಳಪು ಉಣ್ಣೆಕತ್ತರಿಸಿ ಸ್ನಾನಮಾಡಿಸಿದ ಕುರಿಮಂದೆಯ ಬಿಳುಪು. ಮೇಲೇರುತ್ತಿವೆ ಅವು ಜೋಡಿ ಜೋಡಿಯಾಗಿ ಒಂಟಿಯಾದುದೊಂದು ಇಲ್ಲ ಅವುಗಳಲಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಿನ್ನ ಹಲ್ಲುಗಳ ಹೊಳಪು ಉಣ್ಣೆ ಕತ್ತರಿಸಿ ಸ್ನಾನಮಾಡಿಸಿದ ಕುರಿಮಂದೆಗೆ ಸಮಾನ. ಅವು ಜೊತೆಯಾಗಿಯೇ ಇರುತ್ತವೆ. ಅವುಗಳಲ್ಲಿ ಒಂದೂ ಒಂಟಿಯಾಗಿರದು.