Song of Solomon 4:6 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಹಗಲು ತನ್ನ ಕೊನೆ ಉಸಿರೆಳೆಯುವವರೆಗೆ ಮತ್ತು ನೆರಳುಗಳೆಲ್ಲಾ ಓಡಿಹೋಗುವವರೆಗೆ ನಾನು ಗೋಲರಸದ ಬೆಟ್ಟಕ್ಕೂ ಧೂಪದ ಗುಡ್ಡಕ್ಕೂ ಹೋಗುವೆನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಕತ್ತಲು ಕಳೆಯುವ ತನಕ, ಹೊತ್ತು ಮೂಡುವವರೆಗೆ ರಕ್ತಬೋಳದ ಬೆಟ್ಟಕ್ಕೂ, ಧೂಪದ ಗುಡ್ಡಕ್ಕೂ ತೆರಳಿ ಸಂಚರಿಸುವೆ ನಾನು.
Kannada BSI Bible 2016
ಉದಯವಾಗುವ ವರೆಗೂ ನೆರಳುಗಳು ಓಡಿಹೋಗುವ ವರೆಗೂ ನಾನು ರಕ್ತಬೋಳದ ಪರ್ವತಕ್ಕೂ ಸಾಂಬ್ರಾಣಿಯ ಗುಡ್ಡಕ್ಕೂ ಹೋಗುವೆನು.
Kannada BSI JV (ಕನ್ನಡ ಸತ್ಯವೇದವು J.V. (BSI))
ನಾನು ರಕ್ತಬೋಳದ ಬೆಟ್ಟಕ್ಕೂ ಧೂಪದ ಗುಡ್ಡಕ್ಕೂ ತೆರಳಿ ಹಗಲು ತಂಪಾಗಿ ನೆರಳು ಇಳಿಯುವ ತನಕ ಚರಿಸುತ್ತಿರುವೆನು.
Kannada Bible (KNCL) BSI 2016
ಕತ್ತಲು ಕಳೆಯುವ ಮುನ್ನ ಹೊತ್ತು ಮೂಡುವ ಮುನ್ನ ಪರಿಮಳದ ಬೆಟ್ಟಕೆ ತೆರಳುವೆ ಧೂಪದ ಗುಡ್ಡದೊಳು ಅಡ್ಡಾಡುವೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಹೊತ್ತು ಮೂಡುವವರೆಗೂ ನೆರಳು ಓಡಿ ಹೋಗುವವರೆಗೂ ನಾನು ರಕ್ತಬೋಳದ ಪರ್ವತಕ್ಕೂ ಸಾಂಬ್ರಾಣಿಯ ಗುಡ್ಡಕ್ಕೂ ಹೋಗುವೆನು.