Song of Solomon 5:13 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಅವನ ಕೆನ್ನೆಗಳು ಸುಗಂಧಸಸ್ಯಗಳ ದಿಬ್ಬಗಳಂತೆಯೂ ಸುವಾಸನೆಯುಳ್ಳ ಹೂವುಗಳಂತೆಯೂ ಇವೆ. ಅವನ ತುಟಿಗಳು ಕೆಂದಾವರೆಗಳಂತಿವೆ; ಅವನ ತುಟಿಗಳಲ್ಲಿ ಗೋಲರಸವು ತೊಟ್ಟಿಕ್ಕುತ್ತದೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವನ ಕೆನ್ನೆಗಳು ಕರ್ಣಕುಂಡಲ ಗಿಡಗಳ ಪಾತಿಗಳಂತೆಯೂ ಸುಗಂಧಸಸ್ಯಗಳು ಬೆಳೆಯುವ ದಿಬ್ಬಗಳಂತೆಯೂ ಇವೆ; ಅಚ್ಚರಕ್ತಬೋಳವನ್ನು ಸುರಿಸುವ ಅವನ ತುಟಿಗಳು ಕೆಂದಾವರೆಗಳೇ.
Kannada BSI Bible 2016
ಅವನ ಕೆನ್ನೆಗಳು ಸುಗಂಧಮಡಿಯ ಹಾಗೆಯೂ ಸುವಾಸನೆಯ ಪುಷ್ಪಗಳ ಹಾಗೆಯೂ ಅವೆ. ಅವನ ತುಟಿಗಳು ತಾವರೆಗಳ ಹಾಗೆ ಸೋರುವ ಸುಗಂಧ ರಕ್ತಬೋಳವನ್ನು ಸುರಿಯುತ್ತವೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವನ ಕೆನ್ನೆಗಳು ಕರ್ಣಕುಂಡಲ ಗಿಡಗಳ ಪಾತಿಗಳಂತೆಯೂ ಸುಗಂಧಸಸ್ಯಗಳು ಬೆಳೆಯುವ ದಿಬ್ಬಗಳಂತೆಯೂ ಇವೆ; ಅಚ್ಚರಕ್ತಬೋಳವನ್ನು ಸುರಿಸುವ ಅವನ ತುಟಿಗಳು ಕೆಂದಾವರೆಗಳೇ.
Kannada Bible (KNCL) BSI 2016
ಅವನ ಕೆನ್ನೆಗಳು ಕರ್ಣಕುಂಡಲದ ಪಾತಿಗಳು ಸುಗಂಧ ಸಸ್ಯಗಳು ಬೆಳೆಯುವ ದಿಬ್ಬಗಳು ಅವನ ತುಟಿಗಳು ಅಚ್ಚ ಪರಿಮಳ ಸೂಸುವ ಕೆಂದಾವರೆಗಳು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವನ ಕೆನ್ನೆಗಳು ಸುಗಂಧ ಸಸ್ಯಗಳು ಬೆಳೆಯುವ ದಿಬ್ಬಗಳಂತಿವೆ. ಅವನ ತುಟಿಗಳು ಸುಗಂಧ ರಕ್ತಬೋಳವನ್ನು ಸುರಿಸುವ ಕೆಂದಾವರೆಗಳು.