Song of Solomon 5:2 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನಾನು ನಿದ್ರೆಮಾಡುತ್ತಿರುವಾಗಲೂ ಹೃದಯ ಎಚ್ಚರವಾಗಿರುವುದು. ನನ್ನ ಪ್ರಿಯನು ಬಾಗಿಲು ತಟ್ಟುತ್ತಿರುವುದು ನನಗೆ ಕೇಳುತ್ತಿದೆ. “ನನ್ನ ಪ್ರಿಯಳೇ, ನನ್ನ ಕಾಂತಳೇ, ನನ್ನ ಪಾರಿವಾಳವೇ, ನನ್ನ ನಿರ್ಮಲೆಯೇ, ಬಾಗಿಲು ತೆರೆ! ನನ್ನ ತಲೆಯು ಇಬ್ಬನಿಯಿಂದ ತೇವವಾಗಿದೆ; ನನ್ನ ಕೂದಲು ರಾತ್ರಿ ಬೀಳುವ ಹನಿಗಳಿಂದ ತೇವವಾಗಿದೆ.”
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಾನು ನಿದ್ರೆಗೊಂಡಿದ್ದರೂ ನನ್ನ ಹೃದಯವು ಎಚ್ಚರಗೊಂಡಿತ್ತು. ಇಗೋ, ಎನ್ನಿನಿಯನು ಕದ ತಟ್ಟಿ, “ಪ್ರಿಯಳೇ, ಕಾಂತಳೇ, ಪಾರಿವಾಳವೇ, ನಿರ್ಮಲೆಯೇ, ಬಾಗಿಲು ತೆಗೆ! ನನ್ನ ತಲೆಯ ಮೇಲೆಲ್ಲಾ ಇಬ್ಬನಿಯು ಬಿದ್ದಿದೆ, ನನ್ನ ಕೂದಲು ರಾತ್ರಿ ಬೀಳುವ ಹನಿಗಳಿಂದ ತುಂಬಿದೆ” ಅಂದನು.
Kannada BSI Bible 2016
ನಾನು ನಿದ್ರೆಗೈದರೂ ನನ್ನ ಹೃದಯವು ಎಚ್ಚರ ವಾಗುವದು. ಇದು ತಟ್ಟುವ ನನ್ನ ಪ್ರಿಯನ ಶಬ್ದ; ಅದು--ನನಗೆ ತೆರೆ, ನನ್ನ ಸಹೋದರಿಯೇ, ನನ್ನ ಪ್ರಿಯಳೇ, ನನ್ನ ಪಾರಿವಾಳವೇ, ನಿರ್ಮಲೆಯೇ, ನನ್ನ ತಲೆಯು ಮಂಜಿನಿಂದಲೂ ನನ್ನ ಕೂದಲು ರಾತ್ರಿಯ ಬಿಂದುಗಳಿಂದಲೂ ತೋಯಲ್ಪಟ್ಟಿವೆ ಎಂಬದು.
Kannada BSI JV (ಕನ್ನಡ ಸತ್ಯವೇದವು J.V. (BSI))
ನಾನು ನಿದ್ರೆಗೊಂಡಿದ್ದರೂ ನನ್ನ ಹೃದಯವು ಎಚ್ಚರಗೊಂಡಿತ್ತು; ಇಗೋ, ಎನ್ನಿನಿಯನು ಕದ ತಟ್ಟಿ ಪ್ರಿಯಳೇ, ಕಾಂತಳೇ, ಪಾರಿವಾಳವೇ, ನಿರ್ಮಲೆಯೇ, ಬಾಗಿಲು ತೆಗೆ! ನನ್ನ ತಲೆಯ ಮೇಲೆಲ್ಲಾ ಇಬ್ಬನಿಯು ಬಿದ್ದಿದೆ, ನನ್ನ ಕೂದಲು ರಾತ್ರಿ ಬೀಳುವ ಹನಿಗಳಿಂದ ತುಂಬಿದೆ ಅಂದನು.
Kannada Bible (KNCL) BSI 2016
ನಾ ನಿದ್ರಿಸುತ್ತಿದ್ದರೂ, ಎಚ್ಚರಗೊಂಡಿತ್ತು ನನ್ನ ಹೃದಯ ಇದೋ, ಬಾಗಿಲು ತಟ್ಟುತಿಹನು ನನ್ನ ಇನಿಯ! ನಲ್ಲ: ನನ್ನ ಪ್ರಿಯಳೇ, ನನ್ನ ಕಾಂತಳೇ, ಪಾರಿವಾಳವೇ, ಪರಿಪೂರ್ಣಳೇ, ಬಾಗಿಲು ತೆಗೆ ನನಗೆ, ನನ್ನ ತಲೆಯೆಲ್ಲಾ ನೆನೆದಿದೆ ಇಬ್ಬನಿಯಿಂದ ನನ್ನ ಕೂದಲು ತೊಯ್ದಿದೆ ರಾತ್ರಿಯ ಮಂಜಿನಿಂದ. ನಲ್ಲೆ:
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಾನು ನಿದ್ರಿಸುತ್ತಿದ್ದರೂ, ನನ್ನ ಹೃದಯವು ಎಚ್ಚರವಾಗಿತ್ತು. ಇಗೋ! ಬಾಗಿಲು ತಟ್ಟುವ ನನ್ನ ಪ್ರಿಯನ ಶಬ್ದವಿದು: “ನನ್ನ ಪ್ರಿಯಳೇ, ನನ್ನ ವಧುವೇ, ನನ್ನ ಪಾರಿವಾಳವೇ, ಪರಿಪೂರ್ಣಳೇ, ಬಾಗಿಲು ತೆಗೆ! ನನ್ನ ತಲೆ ಮಂಜಿನಿಂದ ನೆನೆದಿದೆ. ನನ್ನ ಕೂದಲು ರಾತ್ರಿಯ ಹನಿಗಳಿಂದ ತೋಯ್ದಿದೆ.”