Song of Solomon 5:9 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಸ್ತ್ರೀಯರಲ್ಲಿ ಅತ್ಯಂತ ಸೌಂದರ್ಯವತಿಯೇ, ನಿನ್ನ ಪ್ರಿಯನ ಅತಿಶಯವೇನು? ನೀನು ಹೀಗೆ ನಮ್ಮಿಂದ ಪ್ರಮಾಣ ಮಾಡಿಸಲು ನಿನ್ನ ಪ್ರಿಯನ ಅತಿಶಯವೇನು?
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಸ್ತ್ರೀರತ್ನವೇ, ಇತರರ ಕಾಂತರಿಗಿಂತ ನಿನ್ನ ಕಾಂತನ ವಿಶೇಷತೆಯೇನು? ನಮ್ಮಿಂದ ನೀನು ಹೀಗೆ ಪ್ರಮಾಣಮಾಡಿಸುವುದಕ್ಕೆ ಇತರರ ಕಾಂತರಿಗಿಂತ ನಿನ್ನ ಕಾಂತನ ಅತಿಶಯವೇನು?
Kannada BSI Bible 2016
ಇತರ ಪ್ರಿಯನಿಗಿಂತ ನಿನ್ನ ಪ್ರಿಯನ ಅತಿಶಯ ವೇನು? ಸ್ತ್ರೀಯರಲ್ಲಿ ಅತಿ ಸುಂದರಿಯೇ, ನೀನು ನಮಗೆ ಹೀಗೆ ಆಣೆ ಇಡುವದಕ್ಕೆ ಇತರ ಪ್ರಿಯನಿಗಿಂತ ನಿನ್ನ ಪ್ರಿಯನ ಅತಿಶಯವೇನು?
Kannada BSI JV (ಕನ್ನಡ ಸತ್ಯವೇದವು J.V. (BSI))
ಸ್ತ್ರೀರತ್ನವೇ, [ಇತರರ] ಕಾಂತರಿಗಿಂತ ನಿನ್ನ ಕಾಂತನ ಅತಿಶಯವೇನು? ನಮ್ಮಿಂದ ನೀನು ಹೀಗೆ ಪ್ರಮಾಣ ಮಾಡಿಸುವದಕ್ಕೆ [ಇತರರ] ಕಾಂತರಿಗಿಂತ ನಿನ್ನ ಕಾಂತನಲ್ಲಿ ಅತಿಶಯವೇನು?
Kannada Bible (KNCL) BSI 2016
“ಬೇರೆಯವರ ಕಾಂತರಿಗಿಂತ ನಿನ್ನ ಕಾಂತನಲ್ಲಿ ಏನು ವಿಶೇಷ? ಬೇರೆಯವರ ಇನಿಯರಿಗಿಂತ ನಿನ್ನ ಕಾಂತನಲ್ಲಿ ಅದೇನು ಅತಿಶಯ? ಸ್ತ್ರೀರತ್ನವೇ, ಹೇಳು ನಮಗೆಂತು ಈ ಪ್ರಮಾಣ?” ನಲ್ಲೆ:
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಸ್ತ್ರೀಯರಲ್ಲಿ ಅತಿ ಸುಂದರಿಯೇ, ಬೇರೆಯವರ ಪ್ರಿಯನಿಗಿಂತ ನಿನ್ನ ಪ್ರಿಯನ ಅತಿಶಯವೇನು? ನೀನು ನಮಗೆ ಹೀಗೆ ಆಣೆ ಇಡುವುದಕ್ಕೆ ಬೇರೆಯವರ ಪ್ರಿಯರಿಗಿಂತ ನಿನ್ನ ಪ್ರಿಯನ ವಿಶೇಷವೇನು?