Song of Solomon 6:10 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಸೂರ್ಯೋದಯದಂತೆ ಪ್ರಕಾಶಿಸುತ್ತಿರುವ ಈ ಯುವತಿ ಯಾರು? ಚಂದ್ರನಂತೆ ಸೌಮ್ಯಳೂ ಸೂರ್ಯನಂತೆ ಶುಭ್ರಳೂ ಜಯಧ್ವಜವೆತ್ತಿರುವ ಸೈನ್ಯದಂತೆ ಪ್ರಭಾವವುಳ್ಳವಳೂ ಆಗಿರುವ ಇವಳಾರು?
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅರುಣೋದಯದಂತೆ ಉದಯಿಸುವಂತಿರುವಳು, ಚಂದ್ರನಂತೆ ಸೌಮ್ಯ ಸುಂದರಿಯಿವಳು, ಸೂರ್ಯನಂತೆ ಶುಭ್ರಳು, ಧ್ವಜಗಳುಳ್ಳ ಸೈನ್ಯದ ಹಾಗೆ ಭಯಂಕರಳು ಆಗಿರುವ ಇವಳಾರು?
Kannada BSI Bible 2016
ಚಂದ್ರನ ಹಾಗೆ ಸುಂದರಿಯೂ ಸೂರ್ಯನ ಹಾಗೆ ನಿರ್ಮಲವಾದವಳೂ ಧ್ವಜಗಳಿರುವ ದಂಡಿನ ಹಾಗೆ ಭಯಂಕರವಾದವಳೂ ಉದಯದ ಹಾಗೆ ದೃಷ್ಟಿಸಿ ನೋಡುವವಳೂ ಆಗಿರುವ ಇವಳು ಯಾರು?
Kannada BSI JV (ಕನ್ನಡ ಸತ್ಯವೇದವು J.V. (BSI))
ಅರುಣೋದಯವು ದೃಷ್ಟಿಸುವಂತಿರುವ ಇವಳಾರು? ಚಂದ್ರನಂತೆ ಸೌಮ್ಯಳು, ಸೂರ್ಯನಂತೆ ಶುಭ್ರಳು, ಪತಾಕಿನಿಯಂತೆ ಭಯಂಕರಳು ಆಗಿರುವ ಇವಳಾರು?
Kannada Bible (KNCL) BSI 2016
“ಉದಯಿಸುತ್ತಿರುವಳಿವಳು ಅರುಣೋದಯದಂತೆ ಸುಂದರಿಯಾಗಿಹಳು ಚಂದ್ರನಂತೆ ಶುಭ್ರಳಾಗಿಹಳು ಸೂರ್ಯನಂತೆ ಭಯಂಕರಳು ಪತಾಕಿನಿಯಂತೆ ಎಂಥವಳಿರಬಹುದು ಇವಳು ಪೇಳೈ?
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಮೆರವಣೆಗೆಯಲ್ಲಿ ನಕ್ಷತ್ರಗಳ ಹಾಗೆ ಗಂಭೀರಳೂ, ಚಂದ್ರನ ಹಾಗೆ ಸುಂದರಿಯೂ, ಸೂರ್ಯನ ಹಾಗೆ ಪ್ರಕಾಶಿಸುವವಳೂ ಆಗಿರುವ ಈ ಉದಯವಂತೆ ಯಾರು?