Song of Solomon 6:11 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಕಣಿವೆಯ ಸಸ್ಯಗಳು ಹಣ್ಣುಬಿಟ್ಟಿವೆಯೋ ದ್ರಾಕ್ಷಿಬಳ್ಳಿಗಳು ಚಿಗುರಿದೆಯೋ ದಾಳಿಂಬರಗಳು ಹೂ ಬಿಟ್ಟಿವೆಯೋ ಎಂದು ನೋಡಲು ಬಾದಾಮಿ ಮರಗಳ ತೋಟಕ್ಕೆ ಹೋದೆನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ದ್ರಾಕ್ಷಿಯು ಚಿಗುರಿದೆಯೋ, ದಾಳಿಂಬೆ ಗಿಡಗಳು ಹೂಬಿಟ್ಟಿವೆಯೋ ಎಂದು ತಗ್ಗಿನಲ್ಲಿ ಬೆಳೆದ ಸಸ್ಯಗಳನ್ನು ನೋಡಲು ಬಾದಾಮಿಯ ತೋಟಕ್ಕೆ ನಾನು ಹೋಗಿದ್ದೆ.
Kannada BSI Bible 2016
ತಗ್ಗಿನ ಫಲಗಳನ್ನು ನೋಡುವದಕ್ಕೂ ದ್ರಾಕ್ಷೇ ಬಳ್ಳಿಯು ಬೆಳೆದು? ದಾಳಿಂಬರ ಗಿಡಗಳು ಚಿಗುರಿ ವೆಯೋ ಎಂದು ನೋಡುವದಕ್ಕೂ ನಾನು ಬಾದಾ ಮಿಯ ತೋಟಕ್ಕೆ ಹೋದೆನು.
Kannada BSI JV (ಕನ್ನಡ ಸತ್ಯವೇದವು J.V. (BSI))
ದ್ರಾಕ್ಷೆಯು ಚಿಗುರಿದೆಯೋ, ದಾಳಿಂಬರಗಳು ಹೂಬಿಟ್ಟಿವೆಯೋ ಎಂದು ತಗ್ಗಿನ ಸಸ್ಯಗಳನ್ನು ನೋಡಲು ಬಾದಾವಿುಯ ತೋಟಕ್ಕೆ ನಾನು ಹೋಗಿದ್ದಾಗ
Kannada Bible (KNCL) BSI 2016
ದ್ರಾಕ್ಷಾಬಳ್ಳಿ ಚಿಗುರಿದೆಯೋ ದಾಳಿಂಬೆಗಿಡ ಹೂಬಿಟ್ಟಿದೆಯೋ ಎಂದು ನೋಡಲಿಕೆ ಕಣಿವೆಯಲ್ಲಿರುವ ಕುಸುಮಗಳನು ಕಾಣಲಿಕೆ ನಾ ನಡೆದೆ ಬಾದಾಮಿಯ ತೋಟಕೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ದ್ರಾಕ್ಷಿಬಳ್ಳಿಯು ಚಿಗುರಿದೆಯೋ, ದಾಳಿಂಬೆ ಗಿಡ ಹೂಬಿಟ್ಟಿದೆಯೋ ಎಂದು ಕಣಿವೆಯಲ್ಲಿನ ಫಲಗಳನ್ನು ನೋಡಲು ನಾನು ಬಾದಾಮಿಯ ತೋಟಕ್ಕೆ ಹೋದೆನು.