Song of Solomon 6:12 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನಾನು ಅದನ್ನು ಗ್ರಹಿಸಿಕೊಳ್ಳುವುದಕ್ಕಿಂತ ಮೊದಲೇ, ನನ್ನ ಮನಸ್ಸು ದೇಶದ ಪ್ರಧಾನರ ರಥಗಳ ನಡುವೆ ನನ್ನನ್ನು ಕುಳ್ಳರಿಸಿತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇದ್ದಕ್ಕಿದ್ದ ಹಾಗೆ ನಾಯಕನಾಗಿ ನಾನು ಬಯಸಿದಂತೆ ದೇಶ ಪ್ರಧಾನರ ರಥಗಳ ನಡುವೆ ನಾನಿರುವುದನ್ನು ಅರಿತೆನು.
Kannada BSI Bible 2016
ನಾನು ತಿಳಿದಿದ್ದಾಗ ನನ್ನ ಪ್ರಾಣವು ನನ್ನನ್ನು ಅಮ್ಮಿನಾದಿಬ್‌ನ ರಥಗಳ ಹಾಗೆ ಮಾಡಿತು.ತಿರಿಗಿ ಬಾ, ತಿರಿಗಿ ಬಾ, ಓ ಶೂಲಮ್‌ನವಳೇ; ನಾವು ನಿನ್ನನ್ನು ದೃಷ್ಟಿಸುವ ಹಾಗೆ ತಿರಿಗಿ ಬಾ, ತಿರಿಗಿ ಬಾ. ಎರಡು ಸೈನ್ಯದ ಗುಂಪಿನವರ ಹಾಗೆಯೇಶೂಲಮ್ಯಳಲ್ಲಿ ನೀವು ದೃಷ್ಟಿಸಬೇಕಾದದ್ದೇನು?
Kannada BSI JV (ಕನ್ನಡ ಸತ್ಯವೇದವು J.V. (BSI))
ನನ್ನ ತವಕವು ನನ್ನ ದೇಶದ ಪ್ರಧಾನರ ರಥಗಳ ನಡುವೆ ಅಕಸ್ಮಾತ್ತಾಗಿ ನನ್ನನ್ನು ಸಿಕ್ಕಿಸಿತು.
Kannada Bible (KNCL) BSI 2016
ಇದ್ದಕ್ಕಿದ್ದ ಹಾಗೆಯೇ ನಾಯಕನಾಗಿ ನನ್ನ ನಾಡಿಗೆ ನಾ ಕುಳಿತಿದ್ದೆ ರಥದ ಮೇಲೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಾನು ಅದನ್ನು ಅರಿತುಕೊಳ್ಳುವ ಮೊದಲು, ನನ್ನ ಆಸೆ ನನ್ನ ಜನ ಪ್ರಧಾನರ ನಡುವೆ ರಥದ ಮೇಲೆ ಕೂತಿರುವಂತೆ ನನ್ನನ್ನು ನಡೆಸಿತು.