Song of Solomon 6:4 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನನ್ನ ಪ್ರಿಯಳೇ, ನೀನು ತಿರ್ಚ ಪಟ್ಟಣದಂತೆ ಸುಂದರಿ. ನೀನು ಜೆರುಸಲೇಮಿನಂತೆ ರೂಪವತಿ; ಜಯಧ್ವಜವೆತ್ತಿರುವ ಸೈನ್ಯದಂತೆ ಪ್ರಭಾವವುಳ್ಳವಳು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನನ್ನ ಪ್ರಿಯಳೇ, ನೀನು ತಿರ್ಚದಂತೆ ಸುಂದರಿ, ಯೆರೂಸಲೇಮಿನ ಹಾಗೆ ಮನೋಹರಿ, ಧ್ವಜಗಳ್ಳುಳ್ಳ ಸೈನ್ಯದ ಹಾಗೆ ಭಯಂಕರಿ!
Kannada BSI Bible 2016
ಓ ನನ್ನ ಪ್ರಿಯಳೇ, ನೀನು ತಿರ್ಚದಂತೆ ಸುಂದ ರಿಯೂ ಯೆರೂಸಲೇಮಿನ ಹಾಗೆ ರಮ್ಯಳೂ ಧ್ವಜ ಗಳಿರುವ ದಂಡಿನ ಹಾಗೆ ಭಯಂಕರಳೂ ಆಗಿದ್ದೀ.
Kannada BSI JV (ಕನ್ನಡ ಸತ್ಯವೇದವು J.V. (BSI))
ನನ್ನ ಪ್ರಿಯಳೇ, ನೀನು ತಿರ್ಚದಂತೆ ಸುಂದರಿ, ಯೆರೂಸಲೇವಿುನ ಹಾಗೆ ಮನೋಹರಿ ಪತಾಕಿನಿಯಂತೆ ಭಯಂಕರಿ!
Kannada Bible (KNCL) BSI 2016
ನನ್ನ ಪ್ರಿಯಳೇ, ನೀನು ಸುಂದರಿ, ತಿರ್ಚನಗರದಂತೆ ಮನೋಹರಿ, ಜೆರುಸಲೇಮಿನಂತೆ ಭಯಂಕರಿ, ಪತಾಕಿನಿಯಂತೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನನ್ನ ಪ್ರಿಯಳೇ, ನೀನು ತಿರ್ಚ ನಗರದಂತೆ ಸುಂದರಿ, ಯೆರೂಸಲೇಮಿನ ಹಾಗೆ ರಮ್ಯಳು, ಧ್ವಜಗಳಿರುವ ದಂಡಿನ ಹಾಗೆ ಗಂಭೀರಳೂ ಆಗಿರುವೆ.