Song of Solomon 7:4 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನಿನ್ನ ಕೊರಳು ದಂತಗೋಪುರದಂತಿದೆ. ನಿನ್ನ ಕಣ್ಣುಗಳು ಬತ್‌ರಬ್ಬೀಮ್‌ನ ಬಾಗಿಲ ಬಳಿಯಲ್ಲಿರುವ ಹೆಷ್ಬೋನಿನ ಸರೋವರಗಳಂತಿವೆ. ನಿನ್ನ ಮೂಗು ದಮಸ್ಕದ ಕಡೆಗಿರುವ ಲೆಬನೋನಿನ ಗೋಪುರದಂತಿದೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಿನ್ನ ಕೊರಳು ದಂತದ ಗೋಪುರ, ನಿನ್ನ ನೇತ್ರಗಳು ಹೆಷ್ಬೋನಿನಲ್ಲಿನ ಬತ್ ರಬ್ಬೀಮ್ ಬಾಗಿಲ ಬಳಿಯ ಕೊಳಗಳಂತಿವೆ. ನಿನ್ನ ಮೂಗು ದಮಸ್ಕದ ಕಡೆಗಿರುವ ಲೆಬನೋನಿನ ಬುರುಜಿನಂತಿದೆ.
Kannada BSI Bible 2016
ನಿನ್ನ ಕುತ್ತಿಗೆ ದಂತ ಗೋಪುರದ ಹಾಗಿದೆ; ನಿನ್ನ ಕಣ್ಣುಗಳು ಬತ್‌ರಬ್ಬಿ ಮ್‌ನ ಬಾಗಲ ಬಳಿಯಲ್ಲಿರುವ ಹೆಷ್ಬೋನಿನ ಕೊಳ ಗಳಾಗಿವೆ; ನಿನ್ನ ಮೂಗು ದಮಸ್ಕದ ಕಡೆಗೆ ನೋಡುವ ಲೆಬನೋನಿನ ಗೋಪುರದ ಹಾಗಿದೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ನಿನ್ನ ಕಂಠವು ದಂತದ ಗೋಪುರ; ನಿನ್ನ ನೇತ್ರಗಳು ಹೆಷ್ಬೋನಿನಲ್ಲಿನ ಬತ್‍ರಬ್ಬೀಮ್ ಬಾಗಿಲ ಬಳಿಯ ಕೊಳಗಳಂತಿವೆ. ನಿನ್ನ ನಾಸಿಕವು ದಮಸ್ಕದ ಕಡೆಗಿರುವ ಲೆಬನೋನಿನ ಬುರುಜಿನ ಹಾಗಿದೆ.
Kannada Bible (KNCL) BSI 2016
ದಂತದ ಗೋಪುರ ನಿನ್ನ ಕೊರಳು ನಿನ್ನ ಕಣ್ಣುಗಳು ಹೋಷ್ಬೋನಿನಲ್ಲಿನ ಬತ್‍ರಬ್ಬೀಮ್ ಬಾಗಿಲ ಬಳಿ ಇರುವ ಕೊಳಗಳು ನಿನ್ನ ಮೂಗು ದಮಸ್ಕದ ಕಡೆ ಇರುವ ಲೆಬನೋನಿನ ಬುರುಜು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಿನ್ನ ಕೊರಳು ದಂತದ ಗೋಪುರ. ನಿನ್ನ ಕಣ್ಣುಗಳು ಬತ್ ರಬ್ಬೀಮ್ ಬಾಗಿಲ ಬಳಿಯಲ್ಲಿರುವ ಹೆಷ್ಬೋನಿನ ಕೊಳಗಳು. ನಿನ್ನ ಮೂಗು, ದಮಸ್ಕದ ಕಡೆಗಿರುವ ಲೆಬನೋನಿನ ಗೋಪುರದ ಹಾಗಿದೆ.