Song of Solomon 7:5 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನಿನ್ನ ತಲೆಯು ಕರ್ಮೆಲ್ ಬೆಟ್ಟದಂತಿದೆ. ನಿನ್ನ ತಲೆಕೂದಲು ರೇಷ್ಮೆಯಂತಿದೆ. ನಿನ್ನ ಉದ್ದವಾದ, ಸುಂದರವಾದ ಕೂದಲು ರಾಜನನ್ನು ಸಹ ಆಕರ್ಷಿಸುತ್ತದೆ!
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಕರ್ಮೆಲ್ ಬೆಟ್ಟದಂತೆ ಗಂಭೀರವಾಗಿದೆ ನಿನ್ನ ಶಿರಸ್ಸು, ನಿನ್ನ ತಲೆಗೂದಲಿಗಿದೆ ಥಳಥಳಿಸುವ ನುಣುಪುಹೊಳಪಿನ ಬಣ್ಣ, ಅದರಲ್ಲಿದೆ ಅರಸನನ್ನೇ ಸೆರೆಹಿಡಿಯುವಂಥ ಆಕರ್ಷಣೆ.
Kannada BSI Bible 2016
ನಿನ್ನ ತಲೆಯು ಕರ್ಮೆಲಿನ ಹಾಗೆಯೂ ನಿನ್ನ ತಲೆಯ ಕೂದಲು ಧೂಮ್ರದ ಹಾಗೆಯೂ ಇವೆ. ಅರಸನು ವೇದಿಕೆಗಳಲ್ಲಿ ಹಿಡಿಯಲ್ಪಟ್ಟಿದ್ದಾನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ನಿನ್ನ ಶಿರಸ್ಸು ಕರ್ಮೆಲ್ ಬೆಟ್ಟದಂತೆ ಗಂಭೀರ; ನಿನ್ನ ತಲೆಯ ಕೂದಲು ಧೂಮ್ರವರ್ಣವು; ರಾಜನು ಅದರ ತೆಕ್ಕೆತೆಕ್ಕೆಗಳಲ್ಲಿ ಕಟ್ಟುಬಿದ್ದಿದ್ದಾನೆ.
Kannada Bible (KNCL) BSI 2016
ನಿನ್ನ ಶಿರ ಎತ್ತರವಾದ ಕಾರ್ಮೆಲ್ ಶಿಖರದಂತೆ ಗಂಭೀರ ನಿನ್ನ ತಲೆಗೂದಲಿಗಿದೆ ಥಳಥಳಿಸುವ ನುಣುಪು ಹೊಳಪಿನ ಬಣ್ಣ ತನ್ನ ತೆಕ್ಕೆಯಲ್ಲಿ ಅರಸನನೇ ಸೆರೆಹಿಡಿಯುವಂಥ ಆಕರ್ಷಣ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಿನ್ನ ತಲೆಯು ಕರ್ಮೆಲ್ ಬೆಟ್ಟದಂತೆ ವೈಭವ. ನಿನ್ನ ತಲೆಕೂದಲು ಧೂಮ್ರ ಬಣ್ಣದ ಹಾಗೆ ಇದೆ. ಹೆಣೆದ ಆ ಜಡೆಯಿಂದ ಅರಸನಿಗೂ ಆಕರ್ಷಣ.