Song of Solomon 7:9 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನಿನ್ನ ಬಾಯಿ ಉತ್ತಮವಾದ ದ್ರಾಕ್ಷಾರಸದಂತಿರಲಿ. ನನ್ನ ಪ್ರಿಯೆಗಾಗಿ ಈ ದ್ರಾಕ್ಷಾರಸವು ಮೆಲ್ಲನೆ ಇಳಿದುಹೋಗುವುದು. ನಿದ್ರಿಸುವವರ ತುಟಿಗಳಲ್ಲಿ ಅದು ಸರಾಗವಾಗಿ ಹರಿದುಹೋಗುವುದು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಿನ್ನ ಚುಂಬನ ಉತ್ತಮ ದ್ರಾಕ್ಷಾರಸದ ಹಾಗಿರಲಿ, ನಿದ್ರಿಸುವವರ ತುಟಿಗಳಲ್ಲಿ ನಯವಾಗಿ ಹರಿಯುವ ಈ ರಸವು ನನ್ನ ನಲ್ಲೆಯಾದ ನಿನ್ನಲ್ಲಿಯೂ ಮೆಲ್ಲನೆ ಇಳಿದು ಬರುವುದು.
Kannada BSI Bible 2016
ನಿನ್ನ ಬಾಯಿಯ ಅಂಗಳವು ನನ್ನ ಪ್ರಿಯನ ಉತ್ತಮವಾದ ದ್ರಾಕ್ಷಾರಸದ ಹಾಗಿರುವದು. ಅದು ಸಿಹಿಯಾಗಿ ಹೋಗುವಂಥದ್ದು, ನಿದ್ರೆಮಾಡುವವರ ತುಟಿಗಳನ್ನು ಮಾತಾಡಿಸುವಂಥದ್ದು.
Kannada BSI JV (ಕನ್ನಡ ಸತ್ಯವೇದವು J.V. (BSI))
ನಿನ್ನ ಮುದ್ದುಗಳು ಉತ್ತಮದ್ರಾಕ್ಷಾರಸದ ಹಾಗಿರಲಿ; ನಿದ್ರಿಸುವವರ ತುಟಿಗಳಲ್ಲಿ ಸರಾಗವಾಗಿ ಹರಿಯುವ ಈ ರಸವು ನನ್ನ ನಲ್ಲೆಯಾದ ನಿನ್ನಲ್ಲಿಯೂ ಮೆಲ್ಲನೆ ಇಳಿದು ಬರುವದು.
Kannada Bible (KNCL) BSI 2016
ನಿನ್ನ ಚುಂಬನ ಶ್ರೇಷ್ಠವಾದ ಮಧುಪಾನ ನನ್ನ ಇನಿಯನ ಬಾಯಲ್ಲಿಳಿಯಲಿ ಆ ರಸಪಾನ ನಿದ್ರಿಸುವವನಾ ತುಟಿಗಳಲಿ ಹರಿಯಲಿ ಆ ಪಾನ!
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಿನ್ನ ಬಾಯಿಯ ಮುದ್ದುಗಳು ಉತ್ತಮ ದ್ರಾಕ್ಷಾರಸದ ಹಾಗಿರಲಿ. ನನ್ನ ಪ್ರಿಯಕರನ ತುಟಿ, ಹಲ್ಲುಗಳಲ್ಲಿ ದ್ರಾಕ್ಷಾರಸವು ನೇರವಾಗಿ ಹರಿದು ಇಂಪಾಗಿ ರುಚಿಸಲಿ.