Song of Solomon 8:2 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನಾನು ನಿನ್ನನ್ನು ನಡೆಸಿಕೊಂಡು ನನ್ನ ತಾಯಿಯು ನನಗೆ ಉಪದೇಶಿಸಿದ ಕೋಣೆಗೆ ಬರುತ್ತಿದ್ದೆನು. ನಾನು ನಿನಗೆ ಸಾಂಬಾರ ಪದಾರ್ಥಗಳನ್ನು ಸೇರಿಸಿದ ದ್ರಾಕ್ಷಾರಸವನ್ನು, ದಾಳಿಂಬೆ ಹಣ್ಣಿನ ರಸವನ್ನು ಕುಡಿಯಲು ಕೊಡುತ್ತಿದ್ದೆನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಿನ್ನನ್ನು ನನ್ನ ತಾಯಿಯ ಮನೆಗೆ ಕರೆದುಕೊಂಡು ಹೋಗುತ್ತಿದ್ದೆನು, ಅಲ್ಲಿ ಆಕೆಯು ನಿನಗೆ ಉಪದೇಶ ಮಾಡಬಹುದಾಗಿತ್ತು; ದ್ರಾಕ್ಷಿಯ ಮಿಶ್ರಪಾನವನ್ನು ಕೊಡುತ್ತಿದ್ದೆ, ನನ್ನ ದಾಳಿಂಬೆಯ ಸವಿರಸವನ್ನು ನಿನಗೆ ಕುಡಿಸುತ್ತಿದ್ದೆನು.
Kannada BSI Bible 2016
ನೀನು ನನ್ನನ್ನು ಉಪದೇಶಿಸುವ ಹಾಗೆ ನಾನು ನಿನ್ನನ್ನು ನಡಿಸಿ ನನ್ನ ತಾಯಿಯ ಮನೆಯೊಳಗೆ ನಿನ್ನನ್ನು ಬರಮಾಡಿ, ದಾಳಿಂಬರ ಹಣ್ಣಿನ ರಸವಾದ ಊರಿಟ್ಟ ಪಾನವನ್ನು ನಿನಗೆ ಕುಡಿಸುತ್ತಿದ್ದೆನು.
Kannada BSI JV (ಕನ್ನಡ ಸತ್ಯವೇದವು J.V. (BSI))
ನಿನ್ನನ್ನು ನನ್ನ ತಾಯಿಯ ಮನೆಗೆ ಕರೆದುಕೊಂಡು ಹೋಗುತ್ತಿದ್ದೆನು, ಅಲ್ಲಿ ನೀನು ನನಗೆ ಉಪದೇಶಮಾಡಬಹುದಾಗಿತ್ತು; ದ್ರಾಕ್ಷೆಯ ವಿುಶ್ರಪಾನಕವನ್ನು, ನನ್ನ ದಾಳಿಂಬರದ ಸವಿರಸವನ್ನು, ನಿನಗೆ ಕುಡಿಸುತ್ತಿದ್ದೆನು.
Kannada Bible (KNCL) BSI 2016
ಆಗ ನಿನ್ನನ್ನು ಕರೆದುಕೊಂಡು ಹೋಗುತ್ತಿದ್ದೆ ನನ್ನನ್ನು ಹೆತ್ತ ತಾಯಿಯ ಮನೆಗೆ ಅಲ್ಲೆ ಉಪದೇಶ ಮಾಡಬಹುದಾಗಿತ್ತು ನೀನು ನನಗೆ ದ್ರಾಕ್ಷಿಯ ಮಿಶ್ರಪಾನಕವನ್ನು ನಾ ಕೊಡುತ್ತಿದ್ದೆ ನಿನಗೆ ದಾಳಿಂಬೆ ರಸವನ್ನು ಕುಡಿಸುತ್ತಿದ್ದೆ ನಿನಗೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಿನ್ನನ್ನು ನನ್ನ ತಾಯಿಯ ಮನೆಗೆ ಕರೆದುಕೊಂಡು ಹೋಗುತ್ತಿದ್ದೆನು. ಅಲ್ಲಿ ನೀನು ನನಗೆ ಉಪದೇಶ ಮಾಡಬಹುದಾಗಿತ್ತು. ನಾನು ದ್ರಾಕ್ಷಿ ಮಿಶ್ರಪಾನಕವನ್ನು ಕೊಡುತ್ತಿದ್ದೆನು. ದಾಳಿಂಬೆ ರಸವನ್ನು ನಿನಗೆ ಕುಡಿಸುತ್ತಿದ್ದೆನು.