Song of Solomon 8:5 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ತನ್ನ ಪ್ರಿಯನನ್ನು ಒರಗಿಕೊಂಡು ಅಡವಿಯಿಂದ ಬರುತ್ತಿರುವ ಈ ಯುವತಿ ಯಾರು? ನಾನು ನಿನ್ನನ್ನು ಸೇಬಿನ ಮರದ ಕೆಳಗೆ ಎಬ್ಬಿಸಿದೆನು. ನಿನ್ನ ತಾಯಿಯು ನಿನ್ನನ್ನು ಗರ್ಭಧರಿಸಿದ್ದು ಅಲ್ಲಿಯೇ. ನೀನು ಹುಟ್ಟಿದ್ದೂ ಅಲ್ಲಿಯೇ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಲ್ಲನನ್ನು ಒರಗಿಕೊಂಡು ಅಡವಿಯಿಂದ ಬರುವ ಇವಳು ಯಾರು? ಎಬ್ಬಿಸಿದೆನಲ್ಲಾ ನಿನ್ನನ್ನು ಆ ಸೇಬಿನ ಮರದಡಿಯಲ್ಲಿ ಇಗೋ, ಅಲ್ಲಿ ನಿನ್ನ ತಾಯಿ ನಿನ್ನನ್ನು ಗರ್ಭಧರಿಸಿದ್ದು, ಅಲ್ಲೇ ನಿನ್ನನ್ನು ಪ್ರಸವವೇದನೆಯಿಂದ ಹೆತ್ತಳು.
Kannada BSI Bible 2016
ತನ್ನ ಪ್ರಿಯನ ಮೇಲೆ ಆತುಕೊಂಡು ಅರಣ್ಯದಿಂದ ಬರುವ ಇವಳು ಯಾರು? ಸೇಬು ಗಿಡದ ಕೆಳಗೆ ನಿನ್ನನ್ನು ಎಚ್ಚರಿಸಿದೆನು; ಅಲ್ಲಿ ನಿನ್ನ ತಾಯಿ ನಿನ್ನನ್ನು ಪಡೆದಳು; ಅಲ್ಲಿ ನಿನ್ನನ್ನು ಹೆತ್ತವಳು ನಿನ್ನನ್ನು ಪಡೆದಳು.
Kannada BSI JV (ಕನ್ನಡ ಸತ್ಯವೇದವು J.V. (BSI))
ನಲ್ಲನನ್ನು ಒರಗಿಕೊಂಡು ಅಡವಿಯಿಂದ ಬರುವ ಇವಳು ಯಾರು? ಆ ಸೇಬುಮರದ ಕೆಳಗೆ ನಿನ್ನನ್ನು ಎಬ್ಬಿಸಿದೆನಲ್ಲಾ! ಇಗೋ, ಅಲ್ಲಿ ನಿನ್ನ ತಾಯಿಯು ನಿನ್ನನ್ನು ಹೆತ್ತಳು, ಅಲ್ಲೇ ಪ್ರಸವವೇದನೆ ಪಟ್ಟು, ನಿನ್ನನ್ನು ಪಡೆದಳು!
Kannada Bible (KNCL) BSI 2016
ನಲ್ಲನನ್ನು ಒರಗಿಕೊಂಡು ಅಡವಿಯಿಂದ ಬರುವ ಈಕೆ ಯಾರು? ನಲ್ಲೆ: ಎಬ್ಬಿಸಿದೆ ನಿನ್ನನ್ನು ಸೇಬುಮರದ ಅಡಿಯಲಿ ನಿನ್ನ ತಾಯಿ ಪ್ರಸವವೇದನೆಯಿಂದ ಹಡೆದಾ ಸ್ಥಳದಲಿ ನಿನ್ನನ್ನು ಆಕೆ ಗರ್ಭಧರಿಸಿದಾ ಜಾಗದಲಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ತನ್ನ ಪ್ರಿಯನನ್ನು ಒರಗಿಕೊಂಡು ಅಡವಿಯಿಂದ ಬರುವ ಇವಳು ಯಾರು? ಸೇಬುಗಿಡದ ಕೆಳಗೆ ನಿನ್ನನ್ನು ಪ್ರೇರಿಸಿದೆನು. ಅದು ನಿನ್ನ ತಾಯಿ ನಿನ್ನನ್ನು ಗರ್ಭಧರಿಸಿದ ಸ್ಥಳ. ಅಲ್ಲಿ ನಿನ್ನ ತಾಯಿ ಪ್ರಸವವೇದನೆಯಿಂದ ನಿನ್ನನ್ನು ಹಡೆದಳು.