Song of Solomon 8:7 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಜಲರಾಶಿಗಳು ಪ್ರೀತಿಯನ್ನು ನಂದಿಸಲಾರವು; ನದಿಗಳು ಪ್ರೀತಿಯನ್ನು ಮುಳುಗಿಸಲಾರವು. ಒಬ್ಬನು ಪ್ರೀತಿಗೋಸ್ಕರ ತನ್ನ ಆಸ್ತಿಯನ್ನೆಲ್ಲ ಕೊಟ್ಟುಬಿಟ್ಟರೆ ಅವನು ಕೇವಲ ತಿರಸ್ಕಾರಕ್ಕೆ ಗುರಿಯಾಗುವನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಂದಿಸಲಾರವು ಪ್ರೀತಿಯನ್ನು ಜಲರಾಶಿಗಳು, ಮುಣುಗಿಸಲಾರವು ಅದನ್ನು ಪ್ರವಾಹಗಳು. ಪ್ರೀತಿಯನ್ನು ಗಳಿಸಲು ಮನೆಮಾರುಗಳನ್ನು ಮಾರಿದರೂ ಸಿಗುವುದು ಅವನಿಗೆ ತಿರಸ್ಕಾರ.
Kannada BSI Bible 2016
ಅನೇಕ ಜಲಗಳು ಪ್ರೀತಿಯನ್ನು ಆರಿ ಸಲಾರವು; ಪ್ರವಾಹಗಳು ಅದನ್ನು ಮುಣುಗಿಸ ಲಾರವು; ಮನುಷ್ಯನು ತನ್ನ ಮನೆಯ ಆಸ್ತಿಯನ್ನೆಲ್ಲಾ ಪ್ರೀತಿಗೋಸ್ಕರ ಕೊಟ್ಟರೆ ಅದು ಸಂಪೂರ್ಣವಾಗಿ ತಿರಸ್ಕರಿಸಲ್ಪಡುವದು.
Kannada BSI JV (ಕನ್ನಡ ಸತ್ಯವೇದವು J.V. (BSI))
ಜಲದ ರಾಶಿಗಳೂ ಪ್ರೀತಿಯನ್ನು ನಂದಿಸಲಾರವು. ಪ್ರವಾಹಗಳಿಗೂ ಅದನ್ನು ಮುಣುಗಿಸಲು ಶಕ್ತಿಯಿಲ್ಲ. ಒಬ್ಬನು ತನ್ನ ಮನೆಮಾರನ್ನೆಲ್ಲಾ ಕೊಟ್ಟು ಪ್ರೀತಿಯನ್ನು ಪಡೆಯಲು ಯತ್ನಿಸಿದರೆ ಕೇವಲ ತಿರಸ್ಕಾರಕ್ಕೆ ಗುರಿಯಾಗುವನು.
Kannada Bible (KNCL) BSI 2016
ನಂದಿಸಲಾರವು ಪ್ರೀತಿಯನ್ನು ಜಲರಾಶಿಗಳು ಮುಳುಗಿಸಲಾರವು ಅದನು ಪ್ರವಾಹಗಳು. ಪ್ರೀತಿಯನು ಗಳಿಸಲು ಮನೆಮಾರುಗಳ ಮಾರಿದರೂ ತಿರಸ್ಕಾರವೆ ಅಂಥವನಿಗೆ ಸಿಗುವುದು. ಸೋದರರು:
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಜಲರಾಶಿಗಳು ಪ್ರೀತಿಯನ್ನು ನಂದಿಸಲಾರವು. ಪ್ರವಾಹಗಳು ಸಹ ಪ್ರೀತಿಯನ್ನು ಮುಳುಗಿಸಲಾರವು. ಒಬ್ಬನು ತನ್ನ ಆಸ್ತಿಯನ್ನೆಲ್ಲಾ ಪ್ರೀತಿಗೋಸ್ಕರ ಕೊಟ್ಟರೂ, ಆ ಪ್ರೀತಿಗೆ ಬದಲಾಗಿ ಅಂಥವನಿಗೆ ಸಂಪೂರ್ಣ ನಿಂದೆಯೇ ಸಿಗುವುದು.