Titus 1:10 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಅವಿಧೇಯರಾಗಿರುವ ಜನರು ಅನೇಕರಿದ್ದಾರೆ. ಅವರು ನಿರರ್ಥಕವಾದುದನ್ನು ಕುರಿತು ಮಾತನಾಡುತ್ತಲೇ ಇರುತ್ತಾರೆ ಮತ್ತು ಉಳಿದ ಜನರನ್ನು ತಪ್ಪುದಾರಿಗೆ ಎಳೆಯುತ್ತಾರೆ. ಯೆಹೂದ್ಯರಲ್ಲದ ಜನರೆಲ್ಲರೂ ಸುನ್ನತಿ ಮಾಡಿಸಿಕೊಳ್ಳಬೇಕೆಂದು ಬೋಧಿಸುವ ಜನರ ಬಗ್ಗೆಯೇ ನಾನು ಹೇಳುತ್ತಿರುವುದು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅನೇಕರು, ಪ್ರಮುಖವಾಗಿ ಸುನ್ನತಿಹೊಂದಿದವರು, ಬರೀ ಮಾತುಗಾರರೂ, ಮೋಸಗಾರರೂ, ಅಧಿಕಾರಕ್ಕೆ ಒಳಪಡದವರು ಆಗಿದ್ದಾರೆ.
Kannada BSI Bible 2016
ಅನೇಕರು ಅವರೊಳಗೆ ಮುಖ್ಯವಾಗಿ ಸುನ್ನತಿ ಯವರು ಅಧಿಕಾರಕ್ಕೆ ಒಳಗಾಗದವರೂ ವ್ಯರ್ಥವಾದ ಮಾತಿನವರೂ ಮೋಸಗಾರರೂ ಆಗಿದ್ದಾರೆ;
Kannada BSI JV (ಕನ್ನಡ ಸತ್ಯವೇದವು J.V. (BSI))
ಅನೇಕರು ಬರೀ ಮಾತಿನವರಾಗಿಯೂ ಮೋಸಗಾರರಾಗಿಯೂ ಇದ್ದು ಅಧಿಕಾರಕ್ಕೆ ಒಳಗಾಗದವರಾಗಿದ್ದಾರೆ; ಅವರೊಳಗೆ ಹೆಚ್ಚು ಜನರು ಸುನ್ನತಿಯವರು.
Kannada Bible (KNCL) BSI 2016
ಇತ್ತೀಚೆಗೆ ಅವಿಧೇಯರು, ಜೊಳ್ಳು ಮಾತಿನವರು ಹಾಗೂ ವಂಚಕಬೋಧಕರು ತಲೆ ಎತ್ತಿದ್ದಾರೆ. ಅವರಲ್ಲಿ ಕ್ರೈಸ್ತರಾಗಿರುವ ಯೆಹೂದ್ಯರು ಸಾಕಷ್ಟು ಮಂದಿ ಇದ್ದಾರೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಏಕೆಂದರೆ, ಅನೇಕ ದಂಗೆಕೋರ ಜನರೂ ಬರೀ ಮಾತನಾಡುವವರೂ ಮೋಸಗೊಳಿಸುವವರೂ ಮುಖ್ಯವಾಗಿ ಸುನ್ನತಿಯಾಗಬೇಕೆಂದು ಹೇಳುವ ಗುಂಪಿನವರೂ ಇದ್ದಾರೆ.