Titus 1:11 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆ ಜನರ ಬೋಧನೆ ತಪ್ಪೆಂದು ನಿರೂಪಿಸಲು ಮತ್ತು ಉಪಯೋಗವಿಲ್ಲದ ಆ ಸಂಗತಿಗಳನ್ನು ಬೋಧಿಸದಂತೆ ಮಾಡಲು ಸಭಾಹಿರಿಯನು ಸಮರ್ಥನಾಗಿರಬೇಕು. ಅವರು ಉಪದೇಶ ಮಾಡಬಾರದ ಸಂಗತಿಗಳನ್ನು ಉಪದೇಶಿಸುತ್ತಾ ಇಡೀ ಕುಟುಂಬಗಳನ್ನೇ ಸಂಪೂರ್ಣವಾಗಿ ನಾಶಗೊಳಿಸುತ್ತಿದ್ದಾರೆ. ಅವರು ಜನರನ್ನು ವಂಚಿಸಿ, ಹಣವನ್ನು ಸಂಪಾದಿಸುವುದಕ್ಕೋಸ್ಕರ ಆ ಸಂಗತಿಗಳನ್ನು ಉಪದೇಶಿಸುತ್ತಿದ್ದಾರೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವರು ಅತಿಲಾಭವನ್ನು ಪಡೆದುಕೊಳ್ಳುವುದಕ್ಕಾಗಿ ಮಾಡಬಾರದ ಉಪದೇಶವನ್ನು ಮಾಡಿ ಕುಟುಂಬ ಕುಟುಂಬಗಳನ್ನೇ ಹಾಳುಮಾಡುತ್ತಾರಾದ್ದರಿಂದ ಅವರ ಬಾಯಿ ಮುಚ್ಚಿಸಬೇಕಾಗಿದೆ.
Kannada BSI Bible 2016
ಅವರು ನೀಚಲಾಭವನ್ನು ಹೊಂದುವದಕ್ಕಾಗಿ ಮಾಡಬಾರದ ಉಪದೇಶವನ್ನು ಮಾಡಿ ಇಡೀ ಕುಟುಂಬಗಳನ್ನೇ ಹಾಳುಮಾಡುತ್ತಾರಾದದರಿಂದ ಅವರ ಬಾಯಿಗಳನ್ನು ಮುಚ್ಚಿಸತಕ್ಕದ್ದು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವರು ನೀಚಲಾಭವನ್ನು ಹೊಂದುವದಕ್ಕಾಗಿ ಮಾಡಬಾರದ ಉಪದೇಶವನ್ನು ಮಾಡಿ ಕುಟುಂಬಕುಟುಂಬಗಳನ್ನೇ ಹಾಳುಮಾಡುತ್ತಾರಾದದರಿಂದ ಅವರ ಬಾಯಿ ಮುಚ್ಚಿಸಬೇಕಾಗಿದೆ.
Kannada Bible (KNCL) BSI 2016
ಇವರ ಬಾಯಿ ಮುಚ್ಚಿಸಬೇಕಾಗಿದೆ. ಏಕೆಂದರೆ, ಇವರು ಹಣಸಂಪಾದನೆಯ ದುರುದ್ದೇಶದಿಂದ ಮಾಡಬಾರದ ಬೋಧನೆಯನ್ನು ಮಾಡಿ ಅನೇಕ ಕುಟುಂಬಗಳನ್ನು ಹಾಳುಮಾಡುತ್ತಿದ್ದಾರೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವರು ನೀಚಲಾಭವನ್ನು ಹೊಂದುವುದಕ್ಕಾಗಿ ಮಾಡಬಾರದ ಬೋಧನೆಯನ್ನು ಮಾಡಿ ಇಡೀ ಕುಟುಂಬಗಳನ್ನೇ ಹಾಳು ಮಾಡುತ್ತಿದ್ದಾರೆ. ಆದ್ದರಿಂದ ಅವರ ಬಾಯಿಗಳನ್ನು ಮುಚ್ಚಿಸಬೇಕಾಗಿದೆ.