Titus 1:12 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಅವರ ಪ್ರವಾದಿಗಳಲ್ಲಿ ಒಬ್ಬನು, “ಕ್ರೇತದ ಜನರು ಯಾವಾಗಲೂ ಸುಳ್ಳು ಹೇಳುತ್ತಾರೆ. ಅವರು ದುಷ್ಟ ಮೃಗಗಳಾಗಿದ್ದಾರೆ; ಸೋಮಾರಿತನದಿಂದ ಕೆಲಸವನ್ನೇ ಮಾಡದೆ ಹೊಟ್ಟೆಬಾಕರಾಗಿದ್ದಾರೆ” ಎಂದು ಹೇಳಿದ್ದಾನೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“ಕ್ರೇತ್ ದ್ವೀಪದವರು ಯಾವಾಗಲೂ ಸುಳ್ಳುಗಾರರೂ, ದುಷ್ಟಮೃಗಗಳೂ, ಸೋಮಾರಿಗಳಾದ ಹೊಟ್ಟೆಬಾಕರೂ” ಆಗಿದ್ದಾರೆಂದು ಅವರ ಸ್ವಂತ ಪ್ರವಾದಿಗಳಲ್ಲಿಯೇ ಒಬ್ಬ ಪ್ರವಾದಿಯು ಹೇಳಿದ್ದಾನೆ.
Kannada BSI Bible 2016
ಕ್ರೇತದವರು ಯಾವಾಗಲೂ ಸುಳ್ಳುಗಾರರೂ ದುಷ್ಟಮೃಗಗಳೂ ಹೊಟ್ಟೇಬಾಕರೂ ಆಗಿದ್ದಾರೆಂದು ಅವರ ಸ್ವಂತ ಪ್ರವಾದಿಗಳಲ್ಲಿ ಒಬ್ಬನು ಹೇಳಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಕ್ರೇತದವರು ಯಾವಾಗಲೂ ಸುಳ್ಳುಗಾರರೂ ದುಷ್ಟಮೃಗಗಳೂ ಸೋಮಾರಿಗಳಾದ ಹೊಟ್ಟೇಬಾಕರೂ ಆಗಿದ್ದಾರೆಂದು ಅವರಲ್ಲಿಯೇ ಹುಟ್ಟಿದ ಒಬ್ಬ ಪ್ರವಾದಿಯು ಹೇಳಿದನು. ಈ ಸಾಕ್ಷಿಯು ನಿಜವೇ.
Kannada Bible (KNCL) BSI 2016
ಕ್ರೇಟ್‍ನವನೇ ಆದ ಅವರ ಪ್ರವಾದಿಯೊಬ್ಬನು ಸ್ವಜನರ ವಿಷಯವಾಗಿ ಹೀಗೆಂದಿದ್ದಾನೆ: ‘ಕ್ರೇಟ್ ನಿವಾಸಿಗಳು ಸದಾ ಸುಳ್ಳುಗಾರರು, ದುಷ್ಟಮೃಗಗಳು, ಸೋಮಾರಿಗಳು ಮತ್ತು ಹೊಟ್ಟೆಬಾಕರು’ - ಈ ಮಾತು ನಿಜವಾದುದು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಕ್ರೇತದವರು ಯಾವಾಗಲೂ ಸುಳ್ಳುಗಾರರೂ ದುಷ್ಟಮೃಗಗಳಂಥವರೂ ಸೋಮಾರಿಗಳಾದ ಹೊಟ್ಟೆಬಾಕರೂ ಆಗಿದ್ದಾರೆ!” ಎಂದು ಅವರ ಸ್ವಂತ ಪ್ರವಾದಿಗಳಲ್ಲಿ ಒಬ್ಬನು ಹೇಳಿದನು.