Titus 1:16 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ದೇವರ ಬಗ್ಗೆ ತಮಗೆ ತಿಳಿದಿದೆಯೆಂದು ಅವರು ಹೇಳಿದರೂ ಅವರು ದೇವರನ್ನು ತಿಳಿದಿಲ್ಲವೆಂದು ಅವರ ಕೆಟ್ಟಕಾರ್ಯಗಳೇ ಸ್ಪಷ್ಟಪಡಿಸುತ್ತವೆ. ಅವರು ಭಯಂಕರವಾದ ಜನರು ಮತ್ತು ಅವಿಧೇಯರು. ಯಾವ ಸತ್ಕಾರ್ಯಗಳನ್ನು ಮಾಡುವುದಕ್ಕೂ ಅವರು ಯೋಗ್ಯರಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವರು ತಾವು ದೇವರನ್ನು ಅರಿತವರೆಂದು ಹೇಳಿಕೊಳ್ಳುತ್ತಾರೆ; ಆದರೆ ಅವರ ನಡತೆ ತದ್ವಿರುದ್ಧವಾಗಿರುತ್ತದೆ. ಅವರು ಅಸಹ್ಯ ಕೃತ್ಯಗಳಲ್ಲಿ ಭಾಗವಹಿಸುವವರೂ, ದೇವರಿಗೆ ಅವಿಧೇಯರೂ ಆಗಿರುವುದರಿಂದ ದೇವರನ್ನು ತಮ್ಮ ಕೃತ್ಯಗಳಿಂದಲೇ ಅಲ್ಲಗಳೆಯುತ್ತಾರೆ ಹಾಗು ಸತ್ಕಾರ್ಯವನ್ನು ಮಾಡಲು ಅಯೋಗ್ಯರಾಗಿದ್ದಾರೆಂದು ಸಾಬಿತುಪಡಿಸುತ್ತಾರೆ.
Kannada BSI Bible 2016
ಅವರು ತಾವು ದೇವರನ್ನು ಅರಿತವರೆಂದು ಹೇಳಿ ಕೊಳ್ಳುತ್ತಾರೆ; ಆದರೆ ಅವರು ಅಸಹ್ಯರೂ ಅವಿಧೇಯ ರೂ ಸತ್ಕಾರ್ಯಗಳಿಗೆಲ್ಲಾ ಭ್ರಷ್ಟರೂ ಆಗಿರುವದರಿಂದ ದೇವರನ್ನು ತಮ್ಮ ಕೃತ್ಯಗಳಿಂದಲೇ ಅಲ್ಲಗಳೆಯುವರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವರು ತಾವು ದೇವರನ್ನು ಅರಿತವರೆಂದು ಹೇಳಿಕೊಳ್ಳುತ್ತಾರೆ; ಆದರೆ ಅವರು ಅಸಹ್ಯರೂ ಅವಿಧೇಯರೂ ಸತ್ಕಾರ್ಯಗಳಿಗೆಲ್ಲಾ ಅಪ್ರಯೋಜಕರೂ ಆಗಿರುವದರಿಂದ ದೇವರನ್ನು ಅರಿಯೆವೆಂದು ತಮ್ಮ ಕಾರ್ಯಗಳಿಂದಲೇ ಹೇಳಿದಂತಾಯಿತು.
Kannada Bible (KNCL) BSI 2016
ತಾವು ದೇವರನ್ನು ಬಲ್ಲವರೆಂದು ಹೇಳಿಕೊಳ್ಳುತ್ತಾರೆ. ಆದರೆ ಅವರ ನಡತೆ ತದ್ವಿರುದ್ಧವಾಗಿರುತ್ತದೆ. ಇಂಥವರು ಅವಿಧೇಯರೂ ಅಸಹ್ಯರೂ ಆಗಿರುವುದರಿಂದ ಯಾವುದೇ ಸತ್ಕಾರ್ಯವನ್ನು ಮಾಡಲು ಅಯೋಗ್ಯರಾಗಿದ್ದಾರೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ತಾವು ದೇವರನ್ನು ತಿಳಿದವರೆಂದು ಅವರು ವಾದಿಸುತ್ತಾರೆ. ಆದರೆ ತಮ್ಮ ಕೃತ್ಯಗಳಿಂದ ದೇವರನ್ನೇ ಅಲ್ಲಗಳೆಯುವರಾಗಿದ್ದಾರೆ. ಅವರು ಅಸಹ್ಯರೂ ಅವಿಧೇಯರೂ ಯಾವ ಸತ್ಕಾರ್ಯಗಳನ್ನು ಮಾಡುವುದಕ್ಕೆ ಅಯೋಗ್ಯರಾಗಿದ್ದಾರೆ.