Titus 1:4 — Compare Translations

4 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನಾನು ಈ ಪತ್ರವನ್ನು ತೀತನಿಗೆ ಬರೆಯುತ್ತಿದ್ದೇನೆ. ನಮ್ಮೆಲ್ಲರ ನಂಬಿಕೆಯ ಸಂಬಂಧದಲ್ಲಿ ನೀನು ನನಗೆ ನಿಜವಾದ ಮಗನಂತಿರುವೆ. ನಮ್ಮ ತಂದೆಯಾದ ದೇವರಿಂದಲೂ ನಮ್ಮ ರಕ್ಷಕನಾದ ಕ್ರಿಸ್ತ ಯೇಸುವಿನಿಂದಲೂ ನಿನಗೆ ಕೃಪೆಯೂ ಶಾಂತಿಯೂ ಲಭಿಸಲಿ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಹಾಗು, ಆ ಸಂದೇಶವನ್ನು ಸಾರುವ ಜವಾಬ್ದಾರಿಯು ನಮ್ಮ ರಕ್ಷಕನಾದ ದೇವರ ಆಜ್ಞೆಯ ಅನುಸಾರವಾಗಿ ನನಗೆ ಒಪ್ಪಿಸಲ್ಪಟ್ಟಿದೆ ಹಾಗು ಸೂಕ್ತ ಕಾಲದಲ್ಲಿ ಸಂದೇಶವನ್ನು ಸಾರುವುದರ ಮೂಲಕ ತನ್ನ ವಾಕ್ಯವನ್ನು ನನಗೆ ಪ್ರಕಟಪಡಿಸಿದ್ದಾನೆ.
Kannada BSI Bible 2016
ನಮ್ಮಲ್ಲಿ ಹುದುವಾಗಿರುವ ನಂಬಿಕೆ ಗನುಸಾರವಾಗಿ ನನ್ನ ನಿಜಕುಮಾರನಾದ ತೀತನಿಗೆ-- ತಂದೆಯಾದ ದೇವರಿಂದಲೂ ನಮ್ಮ ರಕ್ಷಕನೂ ಕರ್ತನೂ ಆಗಿರುವ ಯೇಸು ಕ್ರಿಸ್ತನಿಂದಲೂ ನಿನಗೆ ಕೃಪೆಯೂ ಕನಿಕರವೂ ಶಾಂತಿಯೂ ಆಗಲಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಮ್ಮಲ್ಲಿ ಹುದುವಾಗಿರುವ ವಿಶ್ವಾಸಕ್ಕೆ ಅನುಸಾರವಾಗಿ ನನ್ನ ನಿಜಕುಮಾರನಾದ ತೀತನಿಗೆ ಬರೆಯುವುದು: ತಂದೆಯಾದ ದೇವರಿಂದಲೂ ನಮಗೆ ರಕ್ಷಕ ಹಾಗೂ ಕರ್ತ ಆಗಿರುವ ಕ್ರಿಸ್ತ ಯೇಸುವಿನಿಂದಲೂ ಕೃಪೆಯೂ ಕರುಣೆಯೂ ಶಾಂತಿಯೂ ಆಗಲಿ.