Titus 1:5 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಇನ್ನೂ ಪೂರ್ಣವಾಗಿಲ್ಲದ ಕಾರ್ಯಗಳನ್ನು ಪೂರ್ಣಗೊಳಿಸುವುದಕ್ಕಾಗಿಯೂ ಪ್ರತಿಯೊಂದು ಪಟ್ಟಣದಲ್ಲಿ ಸಭಾಹಿರಿಯರನ್ನು ಆರಿಸುವುದಕ್ಕಾಗಿಯೂ ನಾನು ನಿನ್ನನ್ನು ಕ್ರೇತದಲ್ಲಿ ಬಿಟ್ಟು ಬಂದೆನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಕ್ರೇತ್ ದ್ವೀಪದಲ್ಲಿ ಇನ್ನೂ ಕ್ರಮಕ್ಕೆ ಬಾರದಿರುವ ಕಾರ್ಯಗಳನ್ನು ಕ್ರಮಪಡಿಸಿ, ಪಟ್ಟಣ ಪಟ್ಟಣಗಳಲ್ಲಿ ಹಿರಿಯರನ್ನು ನೇಮಿಸಬೇಕೆಂದು ನಾನು ನಿನಗೆ ಅಪ್ಪಣೆಕೊಟ್ಟು ನಿನ್ನನ್ನು ಅಲ್ಲಿ ಬಿಟ್ಟು ಬಂದೆ.
Kannada BSI Bible 2016
ಈ ಕಾರಣದಿಂದ ಕ್ರೇತದಲ್ಲಿ ಇನ್ನೂ ಕ್ರಮಕ್ಕೆ ಬಾರದಿರುವವುಗಳನ್ನು ನೀನು ಕ್ರಮಪಡಿಸಿ ನಾನು ನಿನಗೆ ನೇಮಿಸಿದ ಪ್ರಕಾರ ಪ್ರತಿಯೊಂದು ಪಟ್ಟಣ ದಲ್ಲಿ (ಸಭೆಯ) ಹಿರಿಯರನ್ನು ನೇಮಿಸಬೇಕೆಂದು ನಿನ್ನನ್ನು ಅಲ್ಲೇ ಬಿಟ್ಟು ಬಂದೆನು.
Kannada BSI JV (ಕನ್ನಡ ಸತ್ಯವೇದವು J.V. (BSI))
ನೀನು ಕ್ರೇತದ್ವೀಪದಲ್ಲಿ ಇನ್ನೂ ಕ್ರಮಕ್ಕೆ ಬಾರದಿರುವ ಕಾರ್ಯಗಳನ್ನು ಕ್ರಮಪಡಿಸಿ ಪಟ್ಟಣಪಟ್ಟಣಗಳಲ್ಲೂ ಸಭೆಯ ಹಿರಿಯರನ್ನು ನೇವಿುಸಬೇಕೆಂದು ನಾನು ನಿನಗೆ ಅಪ್ಪಣೆ ಕೊಟ್ಟು ನಿನ್ನನ್ನು ಅಲ್ಲೇ ಬಿಟ್ಟು ಬಂದೆನಲ್ಲಾ.
Kannada Bible (KNCL) BSI 2016
ನೀನು ಕ್ರೇಟ್ ದ್ವೀಪದಲ್ಲಿ ಇನ್ನೂ ಸರಿಪಡಿಸಬೇಕಾದ ಕೆಲಸಗಳನ್ನು ಕ್ರಮಪಡಿಸಿ, ಅಲ್ಲಿಯ ಪ್ರತಿಯೊಂದು ಪಟ್ಟಣಕ್ಕೂ ಸಭೆಯ ಹಿರಿಯರನ್ನು ನೇಮಿಸಬೇಕೆಂದು ನಿನ್ನನ್ನು ಅಲ್ಲೇ ಬಿಟ್ಟು ಬಂದೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಕ್ರೇತದ್ವೀಪದಲ್ಲಿ ಪೂರ್ಣಗೊಳಿಸದ ಕಾರ್ಯಗಳನ್ನು ನೀನು ಕ್ರಮಪಡಿಸಿ ನಾನು ನಿನಗೆ ಆಜ್ಞಾಪಿಸಿದ ಪ್ರಕಾರ ಪ್ರತಿಯೊಂದು ಪಟ್ಟಣದಲ್ಲಿ ಹಿರಿಯರನ್ನು ನೇಮಿಸಬೇಕೆಂದು ನಿನ್ನನ್ನು ಅಲ್ಲೇ ಬಿಟ್ಟು ಬಂದೆನು.