Titus 1:6 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಸಭೆಯ ಹಿರಿಯನಾಗುವವನು ಅಪರಾಧಿಯೆಂಬ ನಿಂದನೆಗೆ ಗುರಿಯಾಗಿರಬಾರದು. ಅವನಿಗೆ ಒಬ್ಬಳೇ ಪತ್ನಿಯಿರಬೇಕು. ಅವನ ಮಕ್ಕಳು ವಿಶ್ವಾಸಿಗಳಾಗಿರಬೇಕು; ಅವರು ದುಷ್ಟರೆಂದಾಗಲಿ ಅವಿಧೇಯರೆಂದಾಗಲಿ ಹೇಳಿಸಿಕೊಂಡಿರಬಾರದು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಸಭೆಯ ಹಿರಿಯನು ದೋಷರಹಿತನೂ, ಏಕಪತ್ನಿಯುಳ್ಳವನೂ ಆಗಿರಬೇಕು; ಆತನ ಮಕ್ಕಳು ಕರ್ತನನ್ನು ನಂಬಿದವರಾಗಿರಬೇಕು; ಅವರ ಮಕ್ಕಳು ದುರ್ಮಾರ್ಗಿಗಳೂ ಮತ್ತು ಅವಿಧೇಯತೆಯ ಆರೋಪವಿಲ್ಲದವರು ಆಗಿರಬೇಕು.
Kannada BSI Bible 2016
ಸಭೆಯ ಹಿರಿಯನು ನಿಂದಾ ರಹಿತನೂ ಏಕಪತ್ನಿಯುಳ್ಳವನೂ ಆಗಿರಬೇಕು. ಅವನ ಮಕ್ಕಳು ನಂಬಿಗಸ್ತರಾಗಿರಬೇಕು; ಅವರು ದುರ್ಮಾರ್ಗ ಸ್ತರೆನಿಸಿ ಕೊಂಡವರಾಗಲಿ ಅಧಿಕಾರಕ್ಕೆ ಒಳಗಾಗದವ ರಾಗಲಿ ಆಗಿರಬಾರದು.
Kannada BSI JV (ಕನ್ನಡ ಸತ್ಯವೇದವು J.V. (BSI))
ಸಭೆಯ ಹಿರಿಯನು ನಿಂದಾರಹಿತನೂ ಏಕಪತ್ನಿಯುಳ್ಳವನೂ ಆಗಿರಬೇಕು. ಅವನ ಮಕ್ಕಳು ಕರ್ತನನ್ನು ನಂಬಿದವರಾಗಿರಬೇಕು; ಅವರು ದುರ್ಮಾರ್ಗಸ್ಥರೆನಿಸಿಕೊಂಡವರಾಗಲಿ ಅಧಿಕಾರಕ್ಕೆ ಒಳಗಾಗದವರಾಗಲಿ ಆಗಿರಬಾರದು.
Kannada Bible (KNCL) BSI 2016
ನಾನು ಕೊಟ್ಟ ಸಲಹೆಗಳನ್ನು ಜ್ಞಾಪಿಸಿಕೋ; ಸಭಾಹಿರಿಯನು ನಿಂದಾರಹಿತನೂ ಏಕಪತ್ನಿ ವ್ರತಸ್ಥನೂ ಆಗಿರಬೇಕು. ಆತನ ಮಕ್ಕಳು ವಿಶ್ವಾಸಿಗಳಾಗಿರಬೇಕು. ಅವರು ಸ್ವೇಚ್ಛಾಚಾರಿಗಳಾಗಿರಬಾರದು, ಅವಿಧೇಯರಾಗಿರಬಾರದು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಸಭೆಯ ಹಿರಿಯನು, ನಿಂದಾರಹಿತನೂ ಪತ್ನಿಗೆ ನಂಬಿಗಸ್ತನೂ ಆಗಿರಬೇಕು. ಅವನ ಮಕ್ಕಳು ವಿಶ್ವಾಸಿಗಳಾಗಿರಬೇಕು. ಅವರು ದುರ್ಮಾಗಿಗಳು ಇಲ್ಲವೆ ತಿರುಗಿ ಬೀಳುವವರೂ ಎಂಬ ಆರೋಪವನ್ನು ಹೊಂದಿರಬಾರದು.