Titus 1:7 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಸಭಾಹಿರಿಯನು ದೇವರ ಸೇವೆಯ ಜವಾಬ್ದಾರಿಯನ್ನು ಹೊತ್ತು ಕೊಂಡವನಾಗಿದ್ದಾನೆ. ಆದ್ದರಿಂದ ಅವನು ಅಪರಾಧಿಯೆಂಬ ನಿಂದನೆಗೆ ಒಳಗಾಗಿರಬಾರದು; ಗರ್ವಿಷ್ಠನಾಗಿರಬಾರದು; ಸ್ವಾರ್ಥಿಯಾಗಿರಬಾರದು ಮತ್ತು ಮುಂಗೋಪಿಯಾಗಿರಬಾರದು; ದ್ರಾಕ್ಷಾರಸವನ್ನು ಅತಿಯಾಗಿ ಕುಡಿಯುವವನಾಗಿರಬಾರದು; ಜಗಳಗಂಟನಾಗಿರಬಾರದು; ಜನರನ್ನು ವಂಚಿಸಿ ಶ್ರೀಮಂತನಾಗಲು ಪ್ರಯತ್ನಿಸುವವನಾಗಿರಬಾರದು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಏಕೆಂದರೆ, ಸಭಾಧ್ಯಕ್ಷನು ದೇವರ ಮೇಲ್ವಿಚಾರಕನಾಗಿರುವುದರಿಂದ ದೋಷರಹಿತನಾಗಿರಬೇಕು; ಅವನು ಸ್ವೇಚ್ಛೆಯಾಗಿ ನಡೆಯುವವನೂ, ಮುಂಗೋಪಿಯೂ, ಕುಡುಕನೂ, ಜಗಳಗಂಟನೂ, ಅತಿಲಾಭವನ್ನು ಅಪೇಕ್ಷಿಸುವವನೂ ಆಗಿರದೆ,
Kannada BSI Bible 2016
ಯಾಕಂದರೆ ಸಭಾಧ್ಯಕ್ಷನು ದೇವರ ಮನೆವಾರ್ತೆಯವನಾಗಿರುವದರಿಂದ ನಿಂದಾ ರಹಿತನಾಗಿರಬೇಕು; ಅವನು ಸ್ವೇಚ್ಛಾಪರನೂ ಮುಂಗೋಪಿಯೂ ಕುಡಿಯುವವನೂ ಹೊಡೆದಾಡು ವವನೂ ನೀಚಲಾಭವನ್ನು ಅಪೇಕ್ಷಿಸುವವನೂ ಆಗಿರದೆ
Kannada BSI JV (ಕನ್ನಡ ಸತ್ಯವೇದವು J.V. (BSI))
ಯಾಕಂದರೆ ಸಭಾಧ್ಯಕ್ಷನು ದೇವರ ಮನೆವಾರ್ತೆಯವನಾಗಿರುವದರಿಂದ ನಿಂದಾರಹಿತನಾಗಿರಬೇಕು; ಅವನು ಸ್ವೇಚ್ಫಾಪರನಾದರೂ ಮುಂಗೋಪಿಯಾದರೂ ಕುಡಿದು ಜಗಳಮಾಡುವವನಾದರೂ ಹೊಡೆದಾಡುವವನಾದರೂ ನೀಚಲಾಭವನ್ನು ಅಪೇಕ್ಷಿಸುವವನಾದರೂ ಆಗಿರದೆ
Kannada Bible (KNCL) BSI 2016
ಏಕೆಂದರೆ, ಸಭಾಧ್ಯಕ್ಷನು ದೇವರ ಸೇವೆಯಲ್ಲಿ ಮೇಲ್ವಿಚಾರಕನಾಗಿರುವುದರಿಂದ ನಿಂದಾರಹಿತನಾಗಿರಬೇಕು. ಆತನು ಗರ್ವಿ ಅಥವಾ ಮುಂಗೋಪಿಯಾಗಿರಬಾರದು. ಕುಡಿತವಾಗಲಿ, ಹಿಂಸಾಚಾರವಾಗಲಿ, ಹಿಂಸಾಪ್ರವೃತ್ತಿಯಾಗಲಿ ಅವನಲ್ಲಿರಬಾರದು. ಅವನು ಲಾಭಕೋರನಾಗಿರಬಾರದು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಏಕೆಂದರೆ ಸಭಾಧ್ಯಕ್ಷನು ದೇವರ ಕಾರ್ಯಭಾರವನ್ನು ಉಳ್ಳವನಾಗಿರುವುದರಿಂದ ನಿಂದಾರಹಿತನಾಗಿರಬೇಕು; ಅವನು ಗರ್ವಿಷ್ಠನೂ ಮುಂಗೋಪಿಯೂ ಮದ್ಯಪಾನ ಮಾಡುವವನೂ ಹೊಡೆದಾಡುವವನೂ ನೀಚಲಾಭವನ್ನು ಆಶಿಸುವವನೂ ಆಗಿರಬಾರದು.