Titus 2:12 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನಾವು ದೇವರಿಗೆ ವಿರುದ್ಧವಾಗಿ ಜೀವಿಸದಂತೆಯೂ ಲೋಕದ ಜನರು ಮಾಡಲಪೇಕ್ಷಿಸುವ ಕೆಟ್ಟಕಾರ್ಯಗಳನ್ನು ಮಾಡದಂತೆಯೂ ಅದು ತಡೆಯುತ್ತದೆ. ನಾವು ದೇವರ ಸೇವೆಯನ್ನು ಮಾಡುತ್ತಿದ್ದೇವೆ ಎಂಬುದನ್ನು ತೋರಿಸುವುದಕ್ಕಾಗಿ ನೀತಿವಂತರಾಗಿಯೂ ಜ್ಞಾನಿಗಳಾಗಿಯೂ ಲೋಕದಲ್ಲಿ ಈಗ ಬಾಳಬೇಕೆಂದು ಅದು ಬೋಧಿಸುತ್ತದೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅದು ಭಕ್ತಿಹೀನತೆಯನ್ನೂ, ಲೋಕದ ಆಸೆಗಳನ್ನೂ ತ್ಯಜಿಸಿ ಭಾಗ್ಯಕರವಾದ ನಿರೀಕ್ಷೆಯನ್ನು,
Kannada BSI Bible 2016
ನಾವು ಭಕ್ತಿಹೀನತೆಯನ್ನೂ ಲೋಕದ ಆಶೆಗಳನ್ನೂ ತೊರೆದು ಈಗಿನ ಲೋಕದಲ್ಲಿ ಸ್ವಸ್ಥಚಿತ್ತರಾಗಿಯೂ ನೀತಿವಂತರಾಗಿಯೂ ಭಕ್ತಿಯುಳ್ಳವರಾಗಿಯೂ ಬದುಕ ಬೇಕೆಂದು ಅದು (ಅ ಕೃಪೆಯು) ನಮಗೆ ಬೋಧಿಸು ತ್ತದೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ನಾವು ಭಕ್ತಿಹೀನತೆಯನ್ನೂ ಲೋಕದ ಆಶೆಗಳನ್ನೂ ವಿಸರ್ಜಿಸಿ ಭಾಗ್ಯಕರವಾದ ನಿರೀಕ್ಷೆಯನ್ನು ಅಂದರೆ ಮಹಾದೇವರ ಮತ್ತು ನಮ್ಮ ರಕ್ಷಕನಾದ ಯೇಸು ಕ್ರಿಸ್ತನ ಪ್ರಭಾವದ ಪ್ರತ್ಯಕ್ಷತೆಯನ್ನು ಎದುರುನೋಡುತ್ತಾ ಇಹಲೋಕದಲ್ಲಿ ಸ್ವಸ್ಥಚಿತ್ತರಾಗಿಯೂ ನೀತಿವಂತರಾಗಿಯೂ ಭಕ್ತಿಯುಳ್ಳವರಾಗಿಯೂ ಬದುಕಬೇಕೆಂದು ಅದು ನಮಗೆ ಬೋಧಿಸುತ್ತದೆ.
Kannada Bible (KNCL) BSI 2016
ನಾವು ಭಕ್ತಿಹೀನ ನಡತೆಯನ್ನೂ ಪ್ರಾಪಂಚಿಕ ವ್ಯಾಮೋಹಗಳನ್ನೂ ವಿಸರ್ಜಿಸಿ, ಈ ಲೋಕದಲ್ಲಿ ವಿವೇಕಿಗಳಾಗಿಯೂ ಪ್ರಾಮಾಣಿಕರಾಗಿಯೂ ಭಕ್ತರಾಗಿಯೂ ಜೀವಿಸಬೇಕೆಂದು ಅದು ನಮಗೆ ಬೋಧಿಸುತ್ತದೆ. ಅಲ್ಲದೆ, ಮಹೋನ್ನತ ದೇವರು ಮತ್ತು ನಮ್ಮ ಉದ್ಧಾರಕ ಯೇಸುಕ್ರಿಸ್ತರು ಮಹಿಮಾರೂಪದಲ್ಲಿ ನಮಗೆ ಪ್ರತ್ಯಕ್ಷವಾಗುವ ಸೌಭಾಗ್ಯವನ್ನು ನಾವು ಎದುರುನೋಡಬೇಕೆಂದು ಅದು ಕಲಿಸುತ್ತದೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಾವು ಭಕ್ತಿಹೀನತೆಯನ್ನೂ ಲೋಕದ ಆಶೆಗಳನ್ನೂ ತೊರೆದು, ಈಗಿನ ಲೋಕದಲ್ಲಿ ಸ್ವಶಿಸ್ತನ್ನು ಹೊಂದಿದವವರಾಗಿಯೂ ನೀತಿವಂತರಾಗಿಯೂ ಭಕ್ತಿಯುಳ್ಳವರಾಗಿಯೂ ಬದುಕಬೇಕೆಂತಲೂ ದೇವರ ಕೃಪೆಯು ನಮಗೆ ಬೋಧಿಸುತ್ತದೆ.