Titus 2:5 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಜ್ಞಾನವುಳ್ಳವರಾಗಿರಿ, ಪರಿಶುದ್ಧರಾಗಿರಿ, ನಿಮ್ಮ ಮನೆಕೆಲಸವನ್ನು ನೋಡಿಕೊಳ್ಳಿರಿ, ದಯೆಯುಳ್ಳವರಾಗಿರಿ, ನಿಮ್ಮ ಗಂಡಂದಿರಿಗೆ ವಿಧೇಯರಾಗಿರಿ” ಎಂದು ಉಪದೇಶಿಸಬೇಕು. ಆಗ ದೇವರು ನಮಗೆ ದಯಪಾಲಿಸಿದ ಬೋಧನೆಯನ್ನು ಟೀಕಿಸಲು ಯಾರಿಗೂ ಸಾಧ್ಯವಾಗುವುದಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಸ್ವಂತಮನೆಗಾಗಿ ಕೆಲಸಮಾಡುವವರೂ, ಸುಶೀಲೆಯರೂ ಆಗಿ ತಮ್ಮ ಗಂಡಂದಿರಿಗೆ ವಿಧೇಯರಾಗಿರಬೇಕೆಂದು ಬುದ್ಧಿಹೇಳಬೇಕೆಂದು ನೀನು ವೃದ್ಧ ಸ್ತ್ರೀಯರಿಗೆ ಬೋಧಿಸು.
Kannada BSI Bible 2016
ವಿವೇಕವುಳ್ಳವರೂ ಪತಿವ್ರತೆಯರೂ ಮನೆಯನ್ನು ನೋಡಿಕೊಳ್ಳುವವರೂ ಒಳ್ಳೆಯವರೂ ತಮ್ಮ ಗಂಡಂದಿ ರಿಗೆ ವಿಧೇಯರೂ ಆಗಿರಬೇಕೆಂದು ಅವರಿಗೆ ಹೇಳು.
Kannada BSI JV (ಕನ್ನಡ ಸತ್ಯವೇದವು J.V. (BSI))
ಮನೆಯಲ್ಲೇ ಕೆಲಸಮಾಡುವವರೂ ಸುಶೀಲೆಯರೂ ನಿಮ್ಮ ಗಂಡಂದಿರಿಗೆ ಅಧೀನರೂ ಆಗಿರಬೇಕೆಂದು ಬುದ್ಧಿ ಕಲಿಸುವ ಹಾಗೆ ಬೋಧಿಸು.
Kannada Bible (KNCL) BSI 2016
ಗೃಹಿಣಿಯರು, ವಿವೇಕ ಬುದ್ಧಿಯುಳ್ಳವರು, ಪತಿವ್ರತೆಯರು, ಗೃಹಕೃತ್ಯಗಳನ್ನು ಗಮನಿಸುವವರು, ಸುಶೀಲೆಯರು, ಗಂಡಂದಿರಿಗೆ ವಿಧೇಯರು ಆಗಿ ಬಾಳುವುದನ್ನು ವೃದ್ಧಸ್ತ್ರೀಯರಿಂದ ಕಲಿತುಕೊಳ್ಳಲಿ. ಹೀಗೆ, ದೇವರ ವಾಕ್ಯಕ್ಕೆ ಯಾವ ಅಪವಾದವೂ ಬಾರದಂತೆ ಅವರು ನಡೆದುಕೊಳ್ಳಲಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಸ್ವಶಿಸ್ತನ್ನು ಹೊಂದಿದವರೂ ಪತಿವ್ರತೆಯರೂ ಮನೆಯಲ್ಲಿ ಕೆಲಸ ಮಾಡುವವರೂ ದಯೆವುಳ್ಳವರೂ ತಮ್ಮ ಗಂಡಂದಿರಿಗೆ ಅಧೀನರೂ ಆಗಿರಬೇಕೆಂದು ವೃದ್ಧಸ್ತ್ರೀಯರಿಂದ ಕಲಿತುಕೊಳ್ಳಿರಿ.