Titus 2:7 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನೀನು ಒಳ್ಳೆಯ ಕಾರ್ಯಗಳನ್ನು ಮಾಡುತ್ತಾ ಯುವಕರಿಗೆ ಸರ್ವವಿಧದಲ್ಲಿಯೂ ಮಾದರಿಯಾಗಿರಬೇಕು. ನಿನ್ನ ಉಪದೇಶದಲ್ಲಿ ಯಥಾರ್ಥತೆಯನ್ನು ಮತ್ತು ಗಂಭೀರತೆಯನ್ನು ತೋರಿಸಿಕೊಡು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಸತ್ಕಾರ್ಯ ಮಾಡುವುದರಲ್ಲಿ ನೀನೇ ಮಾದರಿಯಾಗಿರು. ನೀನು ಮಾಡುವ ಉಪದೇಶದಲ್ಲಿ ಸತ್ಯವೂ ಗೌರವವೂ ಆಕ್ಷೇಪಣೆಗೆ ಅವಕಾಶವಿಲ್ಲದಂಥ ಸುಬುದ್ಧಿಯೂ ಇರಬೇಕು;
Kannada BSI Bible 2016
ಎಲ್ಲಾ ವಿಷಯಗಳಲ್ಲಿ ನಿನ್ನನ್ನು ಸತ್ಕಾರ್ಯಗಳ ಮಾದರಿಯಾಗಿ ತೋರಿಸಿಕೊಂಡು ಬೋಧನೆಯಲ್ಲಿ ನಿರ್ಮಲತ್ವವನ್ನೂ ಗೌರವವನ್ನೂ ಯಥಾರ್ಥತೆಯನ್ನೂ ಖಂಡಿಸಲಾಗದಂಥ ಸ್ವಸ್ಥವಾದ ಮಾತನ್ನೂ ತೋರಿಸು;
Kannada BSI JV (ಕನ್ನಡ ಸತ್ಯವೇದವು J.V. (BSI))
ಸತ್ಕಾರ್ಯಮಾಡುವದರಲ್ಲಿ ನೀನೇ ಮಾದರಿಯಾಗಿರು. ನೀನು ಮಾಡುವ ಉಪದೇಶದಲ್ಲಿ ಯಥಾರ್ಥತ್ವವೂ ಗೌರವವೂ ಆಕ್ಷೇಪಣೆಗೆ ಆಸ್ಪದವಿಲ್ಲದಂಥ ಸ್ವಸ್ಥಬುದ್ಧಿಯೂ ಇರಬೇಕು;
Kannada Bible (KNCL) BSI 2016
ಸತ್ಕಾರ್ಯಗಳನ್ನು ಮಾಡುವುದರಲ್ಲಿ ನೀನೇ ಮಾದರಿಯಾಗಿರಬೇಕು ಎಂಬುದನ್ನು ಮರೆಯಬೇಡ. ನಿನ್ನ ಬೋಧನೆ ಯಥಾರ್ಥವೂ ಗಂಭೀರವೂ ಕಳಂಕರಹಿತವೂ ಆಗಿರಲಿ. ಆಗ ನಮ್ಮ ವಿರೋಧಿಗಳು ನಮ್ಮಲ್ಲಿ ತಪ್ಪು ಕಂಡುಹಿಡಿಯಲಾಗದೆ ತಾವೇ ಅಪಮಾನಿತರಾಗುತ್ತಾರೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಎಲ್ಲಾ ವಿಷಯಗಳಲ್ಲಿ ನಿನ್ನನ್ನು ಸತ್ಕಾರ್ಯ ಮಾಡುವುದರಲ್ಲಿ ಆದರ್ಶವಾಗಿ ತೋರಿಸು. ಬೋಧನೆಯಲ್ಲಿ ಪ್ರಾಮಾಣಿಕತೆಯನ್ನೂ ಗಂಭೀರತೆಯನ್ನೂ